ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವು; ನ್ಯಾಯಾಂಗ ತನಿಖೆಗೆ ಎಸ್‌ಯುಸಿಐ ಒತ್ತಾಯ

Date:

ಬಳ್ಳಾರಿ ಮತ್ತು ಬೆಳಗಾವಿಯ ಸರ್ಕಾರಿ ಆಸ್ಪತ್ರೆಳಲ್ಲಿ ಸೇರಿದಂತೆ ಈವರೆಗೆ ರಾಜ್ಯಾದ್ಯಂತ ಬಾಣಂತಿಯರ ಸಾವು ಸಂಭವಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಒತ್ತಾಯಿಸಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕೆ ಪ್ರಕಟಣೆ ನೀಡಿದ ಅವರು, “ಆಸ್ಪತ್ರೆಗಳಲ್ಲಿ ಸಂಭವಿಸಿದ ಬಾಣಂತಿಯರ ದುರಂತಮಯ ಸಾವುಗಳು ರಾಜ್ಯದಲ್ಲಿ ಆಳುವ ಮತ್ತು ವಿರೋಧ ಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಹಿಂದಿನ ಬಿಜೆಪಿ ಆಳ್ವಿಕೆಯ ಸಂದರ್ಭದಲ್ಲೂ ಸೇರಿದಂತೆ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 3000ಕ್ಕೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮುಖ್ಯಮಂತ್ರಿಗಳೇ ಸದನದಲ್ಲಿ ಉಲ್ಲೇಖಿಸಿದ್ದಾರೆ. ಬಿಜೆಪಿಯ ಆಳ್ವಿಕೆಯಲ್ಲೂ ಬಾಣಂತಿಯರು ಆಸ್ಪತ್ರೆಗಳಲ್ಲಿ ಜೀವ ಬಿಟ್ಟಿದ್ದಾರೆ ಎಂಬುದು ಕಾಂಗ್ರೆಸ್ ಸರ್ಕಾರವನ್ನು ಯಾವ ರೀತಿಯಿಂದಲೂ ಸಮರ್ಥಿಸಿದಂತೆ ಆಗುವುದಿಲ್ಲ. ಬದಲಿಗೆ ಎರಡೂ ಪಕ್ಷಗಳಿಗೆ ಜನರ ಜೀವದ ಕುರಿತು ಇರುವ ನಿಷ್ಕಾಳಜಿಯನ್ನು ಎತ್ತಿ ತೋರಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಳ್ಳಾರಿಯಲ್ಲಿ ಸಂಭವಿಸಿದ ಸಾವುಗಳಿಗೆ ಕಳಪೆ ಗುಣಮಟ್ಟದ ಔಷಧಿ ಕಾರಣವೆಂದು ಹೇಳಲಾಗುತ್ತಿದೆ. ಹೌದಾದರೆ ಇಂತಹ ಔಷಧಿಯನ್ನು ಖರೀದಿಸಲು ಅನುಮತಿ ಕೊಟ್ಟವರು ಯಾರು?, ಯಾವ ಕಾರಣಕ್ಕಾಗಿ? ಎಂಬುದೂ ಕೂಡ ಹೊರಬರಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಹೆರಿಗೆಗಾಗಿ ಬರುವ ಬಡಮಹಿಳೆಯರ ಜೀವವನ್ನು ಅಗ್ಗವಾಗಿ ಪರಿಗಣಿಸಿರುವುದು ಅಕ್ಷಮ್ಯ ಅಪರಾಧ. ಎಷ್ಟೇ ಪ್ರಭಾವಿಗಳಾಗಿದ್ದರೂ ಅವರಿಗೆ ಸರಿಯಾದ ಶಿಕ್ಷೆ ಆಗಲೇಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿಓದಿದ್ದೀರಾ? ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

“ಜತೆಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಲು ಅವಶ್ಯಕ ವೈದ್ಯರುmaternal deaths, ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಮತ್ತು ಪ್ರಯೋಗಾಲಯಗಳಲ್ಲಿ ಸೂಕ್ತ ಸೌಕರ್ಯಗಳನ್ನು ಒದಗಿಸಬೇಕು. ಅಲ್ಲದೆ, ಆರೋಗ್ಯ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಿ, ಜನರ ಮೂಲಭೂತ ಅಗತ್ಯವಾದ ಗುಣಮಟ್ಟದ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಮುಂದಾಗಬೇಕು” ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಪರವಾಗಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...