ಕಲಬುರಗಿ | ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

Date:

ಬಾಂಗ್ಲಾ ಹಾಗೂ ಭಾರತದಲ್ಲಿನ ಕೋಮುವಾದ ಖಂಡಿಸಿ ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ರಾಜ್ಯ ಸಮಿತಿ ಸೆಕ್ರೆಟೆರಿಯೇಟ್ ಸದಸ್ಯ ಎಂ. ಶಶಿಧರ್ ಮಾತನಾಡಿ, ‘1971ರ ಬಾಂಗ್ಲಾ ವಿಮೋಚನಾ ಚಳುವಳಿಯಲ್ಲಿ ಮತ್ತು ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ಇತ್ತೀಚಿನ ಐತಿಹಾಸಿಕ ವಿದ್ಯಾರ್ಥಿ ಬಂಡಾಯದಲ್ಲಿ ಮುಸಲ್ಮಾನರು ಮತ್ತು ಹಿಂದೂಗಳು ಪರಸ್ಪರ ಜೀವ ಕೊಟ್ಟು ಹೋರಾಡಿದ್ದರು. ಈಗ ಅಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಯಂತಹ ಘಟನೆಗಳು ವರದಿಯಾಗುತ್ತಿವೆ. ಅಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಕೋಮುವಾದಿ ಶಕ್ತಿಗಳು ದುರುಪಯೋಗ ಮಾಡುತ್ತಿವೆ’ ಎಂದು ದೂರಿದರು.

‘ಭಾರತದಲ್ಲಿಯೂ ಸಹ ಪದೇ ಪದೇ ಅಲ್ಪಸಂಖ್ಯಾತರ ಮೇಲೆ ದಾಳಿಗಳು ನಡೆಯುತ್ತಿವೆ. ಡಿಸೆಂಬರ್ 6ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿದ್ದ ಬಾಬ್ರಿ ಮಸೀದೆಯ ಕಟ್ಟಡವನ್ನು ಕೆಡವಿ ಇಡೀ ದೇಶದಲ್ಲಿ ಕೋಮುವಾದವನ್ನು ಹರಡುವ ಪಿತೂರಿಯನ್ನು ಬಿಜೆಪಿ, ಸಂಘ ಪರಿವಾರ ಮಾಡಿತ್ತು. ಈಗ ಮತ್ತೆ ಇತರೆ ಮಸೀದಿಗಳಲ್ಲಿ ಇಂತಹ ವಿವಾದಗಳನ್ನು ಹುಟ್ಟುಹಾಕುತ್ತಿವೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎನ್‍ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಜನಾಂಗೀಯ ಕಲಹದಲ್ಲಿ ನೂರಾರು ಜನರು ಜೀವ ಕಳೆದುಕೊಂಡಿದ್ದಾರೆ. ಹೀಗೆ ಬಾಂಗ್ಲಾ ಮತ್ತು ಭಾರತದಲ್ಲಿನ ಆಳ್ವಿಕರಿಗೆ ಜನರನ್ನು ಒಡೆದಾಳುವ ಕೋಮುವಾದ, ಜನಾಂಗೀಯವಾದ ಬೇಕಾಗಿದೆʼ ಎಂದು ಆರೋಪಿಸಿದರು.

ʼಎರಡೂ ದೇಶಗಳಲ್ಲಿ ಸಾಮಾನ್ಯ ಜನತೆ ಬೆಲೆ ಏರಿಕೆ, ನಿರುದ್ಯೋಗ, ಕೃಷಿ ಬಿಕ್ಕಟ್ಟು ಮುಂತಾದ ಸಮಸ್ಯೆಗಳಿಂದ ಹೈರಾಣಾಗಿದ್ದಾರೆ. ಶೋಷಣೆ ಆಧಾರಿತ ಬಂಡವಾಳಶಾಹಿ ಪಕ್ಷಗಳು ಕೋಮು ವಿಷ ಬೀಜವನ್ನು ಎಲ್ಲ ಧರ್ಮಗಳ ಜನರ ಮನಸ್ಸಿನಲ್ಲಿ ಬಿತ್ತುತ್ತಿದೆ. ದುಡಿಯುವ ಜನತೆ ಈ ಪಿತೂರಿಯನ್ನು ಅರ್ಥ ಮಾಡಿಕೊಂಡು ತಮ್ಮ ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು. ಜೀವನದ ನೈಜ ಸಮಸ್ಯೆಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕುʼ ಎಂದು ಅವರು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಪ್ರತಿಭಟನೆಯಲ್ಲಿ ಪ್ರಮುಖರಾದ ವಿ.ಜಿ. ದೇಸಾಯಿ, ವಿ.ನಾಗಮ್ಮಾಳ್, ಎಸ್.ಎಮ್ ಶರ್ಮಾ, ಡಾ.ಸೀಮಾ ದೇಶಪಾಂಡೆ, ಮಹೇಶ್ ಎಸ್.ಬಿ., ಜಗನ್ನಾಥ್ ಎಸ್.ಎಚ್., ಹಣಮಂತ್ ಎಸ್.ಎಚ್., ಸಂತೋಷ್ ಹಿರವೆ, ತುಳಜರಾಮ್, ವೆಂಕಟೇಶ್ ದೇವದುರ್ಗ, ರಮೇಶ್, ಸಾಬಮ್ಮ ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...