ಬಳ್ಳಾರಿ | ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತ,ಕಾರ್ಮಿಕರ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.

ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯಾ ಮಾತನಾಡಿ “ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಖಾಸಗೀಕರಣಗೊಂಡು ಜನಗಳ ಕೈಗೆಟುಕದಂತಾಗಿವೆ. ಉದ್ಯೋಗವಿಲ್ಲದೆ ಯುವಜನತೆ ಪರದಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ ಕೇಂದ್ರ ಮೋದಿ ಸರ್ಕಾರ ಈಗ ಅದರ ಬಗ್ಗೆ ಮಾತೇ ಎತ್ತುತ್ತಿಲ್ಲ. ಇನ್ನು ಕಾಯಂ ಉದ್ಯೋಗದ ಮಾತು ಕನಸಾಗಿಯೇ ಉಳಿದಿದೆ. ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಇಳಿಯುವ ಸೂಚನೆಯೇ ಕಾಣುತ್ತಿಲ್ಲ. ಇದರಿಂದಾಗಿ ಜನತೆಯ ಬದುಕು ಬೀದಿಗೆ ಬರುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಯುಸಿಐ (ಸಿ) ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ಮಂಜುಳಾ ಮಾತನಾಡಿ, “ಬೇಟಿ ಬಚಾವೋ ಬೇಟಿ ಪಡಾವೋ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಕೇಂದ್ರ ಸರ್ಕಾರದ ಯೋಜನೆಗಳು ಬರೀ ಘೋಷಣೆಗಳಾಗಿವೆ. ಪ್ರತಿನಿತ್ಯ ಹೆಚ್ಚುತ್ತಿರುವ ಮಹಿಳೆಯರ, ದಲಿತರ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಬದಲಾಗಿ ಜಾತಿ-ಧರ್ಮದಂತಹ ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ತಂದು ಜನರ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿದೆ” ಎಂದು ಕಿಡಿಕಾರಿದರು.

“ರಾಜ್ಯದಲ್ಲಿ ಬರ ಆವರಿಸಿದೆ. ಕುಡಿಯಲು ನೀರಿಲ್ಲದೆ ಜನಗಳು ಪರದಾಡುವಂತಾಗಿದೆ. ಬೆಳೆದ ಬೆಳೆ ಕೈಗೆ ಬಾರದೆ  ರೈತರು ಕಂಗಾಲಾಗಿದ್ದಾರೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ವಿಷಯದಲ್ಲಿ ಕೇಂದ್ರ ಸರ್ಕಾರ ನೀಡಿದ ಭರವಸೆ ಗಾಳಿಗೆ ತೂರಿದೆ. ನರೇಗಾ ಯೋಜನೆ ಕೂಡ ಸರಿಯಾಗಿ ಅನುಷ್ಠಾನಗೊಳ್ಳದ ಪರಿಣಾಮ ಕೂಲಿ ಕಾರ್ಮಿಕರ ಬದುಕು ಆಧೋಗತಿಗೆ ತಲುಪಿದೆ. ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವುದರ ಮೂಲಕ ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕು ಕಸಿದುಕೊಳ್ಳುತ್ತಿದೆ” ಎಂದು ಪ್ರತಿಭಟನಾಕಾರರು ದೂರಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಡಾ.ಪ್ರಮೋದ, ಜಿಲ್ಲಾ ಸಮಿತಿ ಸದಸ್ಯರಾದ ನಾಗಲಕ್ಷ್ಮಿ, ಸೋಮಶೇಖರ್ ಗೌಡ, ಶಾಂತ, ಗೋವಿಂದ ಪದಾಧಿಕಾರಿಗಳಾದ ನಾಗರತ್ನ, ಪಂಪಾಪತಿ ಕೋಳೂರು, ಹನುಮಪ್ಪ, ಈಶ್ವರಿ, ಜಗದೀಶ್ , ರಾಜ, ವಿಜಯಲಕ್ಷ್ಮಿ, ರವಿಕಿರಣ್, ನರಸಣ್ಣ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...