ಹಾವೇರಿ | ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣ; ತನಿಖೆಗೆ ಎಸ್‌ಎಫ್‌ಐ ಆಗ್ರಹ

Date:

ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆ ನಡೆಸಲು ಎಸ್‌ಎಫ್‌ಐ ಆಗ್ರಹಿಸಿದೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಆಲದಕಟ್ಟಿ ಗ್ರಾಮದ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ (16) ತಾಲೂಕಿನ ದೂದಿಹಳ್ಲಿಯ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ, ಮನೆಗೆ ಬಂದಿದ್ದ ವಿದ್ಯಾರ್ಥಿನಿ ಜುಲೈ 2ರಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಎಫ್‌ಐ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಎಸ್. ಮಾತನಾಡಿ, ʼಸಾವಿಗೂ ಮುನ್ನ ವಿದ್ಯಾರ್ಥಿನಿ ಬರೆದ ಪತ್ರದಲ್ಲಿ ತನ್ನ ಸಾವಿಗೆ ಸಹಪಾಠಿ ಹಾಗೂ ಆಕೆಯ ತಾಯಿಯ ಕಿರುಕುಳವೇ ಕಾರಣ ಎಂಬ ಮಾಹಿತಿ ಇದೆ. ಹೀಗಾಗಿ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಬೇಕು. ವಸತಿ ನಿಲಯ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕುʼ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ನಾಗಮ್ಮನವರ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ʼವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ಕುರಿತು ಸಮಗ್ರ ಮಾಹಿತಿ ಪಡೆದು, ಸೂಕ್ತ ತನಿಖೆ ನಡೆಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗುವುದುʼ ಎಂದರು.

ಈ ಸುದ್ದಿ ಓದಿದ್ದೀರಾ? ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಈ ಸಂದರ್ಭದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕ ಅಧ್ಯಕ್ಷ ರೇವಣಸಿದ್ದೇಶ್, ಕಾರ್ಯದರ್ಶಿ ನವೀನ ಎಚ್.ಟಿ. ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...