ಉಡುಪಿ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಾದ್ಯ ಕಲಾವಿದ

Date:

ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸನಿಹ ಬುಧವಾರ ನಡೆದಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32ವ) ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಘಟನೆ ನಡೆದಿರುವ‌ ಕೆಲವು‌ ಕ್ಷಣದಲ್ಲಿಯೇ ನೇಣುಕುಣಿಕೆಯಿಂದ ಇಳಿಸಿದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು, ಸುನಿಲ್ ಬೈಲಕೆರೆಯವರ ಸಹಾಯದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ನಗರ ಪೋಲಿಸ್ ಠಾಣೆಯ‌ ಎ. ಎಸ್. ಐ ಸುಭಾಸ್ ಕಾಮತ್, ಹೆಡ್ ಕಾನ್ಸಟೇಬಲ್ ಹರೀಶ್ ಮಾಳ, ಜಯಕರ್ ಕಾನೂನು ಪ್ರಕ್ರಿಯೆ ನಡೆಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...