ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

Date:

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ ಹಾನಗಲ್ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೇಲ್ ವಿದ್ಯಾರ್ಥಿನಿಯರು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ರಸ್ತೆಯಲ್ಲಿ ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿನಿಯರು, “ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಅವಲಂಬಿಸಿದ್ದೇವೆ. ಆದರೆ, ಹಾನಗಲ್ ಕಡೆಯಿಂದ ಹಾವೇರಿಗೆ ಬರುವ ಬಸ್ಸುಗಳು ಶ್ರೀಕಂಠಪ್ಪ ಬಡಾವಣೆ ಬಳಿ ನಿಲುಗಡೆ ಮಾಡುವುದಿಲ್ಲ. ಪರಿಣಾಮ, ವಿದ್ಯಾರ್ಥಿಗಳಿಗೆ ವಿಪರೀತ ಸಮಸ್ಯೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆ ಪರಿಹರಿಸುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಈ ಹಿಂದೆ ಮನವಿ ಕೊಡಲಾಗಿತ್ತು. ಆದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿಯರ ಪ್ರತಿಭಟನೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೋಲಿಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ನಡುವೆ ವಾಗ್ವಾದಗಳು ನಡೆದಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲವೆಂದು ವಿದ್ಯಾರ್ಥಿನಿಯರು ಪಟ್ಟುಹಿಡಿದ್ದರು.

ಸ್ಥಳಕ್ಕೆ ಬಂದ ಕೆಎಸ್‌ಆರ್‌ಟಿಸಿ ಡಿಫೋ ಮ್ಯಾನೇಜರ್ ಹಾಗೂ ಡಿಟಿಓ ವಿದ್ಯಾರ್ಥಿನಿಯರ ಜೊತೆ ಚರ್ಚೆ ನಡೆಸಿದ್ದಾರೆ. ದಿನನಿತ್ಯ ಬೆಳಿಗ್ಗೆ 8.30 ರಿಂದ 10 ಗಂಟೆವರೆಗೂ ಎರಡು ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು. ಹಾನಗಲ್‌ – ಹಾವೇರಿ ನಡುವೆ ಎರಡೂ ಕಡೆ ಸಂಚರಿಸುವ ಎಲ್ಲ ಬಸ್‌ಗಳು ಶ್ರೀಕಂಠಪ್ಪ ಬಡಾವಣೆ ಬಳಿ ನಿಲುಗಡೆ ಮಾಡಬೇಕು. ಕೆಲವು ಕಂಡಕ್ಟರ್‌ಗಳು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.

ಪ್ರತಿಕ್ರಿಯಿಸಿದ ಡಿಪೋ ಅಧಿಕಾರಿಗಳು, “ಇಂದೇ ಸರ್ವೆ ಮಾಡಿಸಿ ವಿದ್ಯಾರ್ಥಿಗಳಿಗೆ ಬಸ್ ನಿಲಗಡೆ ಮಾಡಲು ಅನುಕೂಲ ಕಲ್ಪಿಸಿಕೊಡಲಾಗುವುದು ಹಾಗೂ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಭಾಗ್ಯಶ್ರೀ, ಐಶ್ವರ್ಯ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಶ್ರೀಕಂಠಪ್ಪ ಬಡಾವಣೆಯ ನಿವಾಸಿಗಳ ಸಂಘದ ಮುಖಂಡರಾದ ಸಿ. ಕೊಟ್ರೆಗೌಡ ಹಾಗೂ ಎರಡೂ ಹಾಸ್ಟೆಲ್ ಗಳ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...