ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಆರೋಪ ಸತ್ಯಕ್ಕೆ ದೂರವಾದ್ದು: ಎಂಟಿಬಿ ನಾಗರಾಜ್

Date:

ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವೆಂದು ಆರೋಪಿಸಿರುವ ಮಾಜಿ ಸಚಿವ ಡಾ. ಸುಧಾಕರ್‌ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಬುಧವಾರ ಟ್ವೀಟ್‌ ಮಾಡಿದ್ದ ಸುಧಾಕರ್, “ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ” ಎಂದು ಹೇಳಿದ್ದರು.

ಸುಧಾಕರ್ ಆರೋಪವನ್ನು ನಿರಾಕರಿಸಿರುವ ಎಂಟಿಬಿ ನಾಗರಾಜ್, “ಇಷ್ಟು ದಿನ ಮೌನವಾಗಿದ್ದು, ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಸುಧಾಕರ್ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಸುಧಾಕರ್ ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈತ್ರಿ ಸರ್ಕಾರದ ಆಡಳಿತ ವೇಳೆ, ಸಿದ್ದರಾಮಯ್ಯರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿದ್ದೆ. ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಿದ್ದೆ. ಆಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿಯೆಂದು ಅವರು ಹೇಳಿದ್ದರಷ್ಟೇ” ಎಂದು ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...