ಮಾಜಿ ಸಚಿವ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುವೆ: ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ

Date:

  • ‘ನಾನು ದ್ವೇಷ, ಗೂಂಡಾಗಿರಿ ರಾಜಕಾರಣ ಮಾಡಲ್ಲ’
  • ‘ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ’

ಮಾಜಿ ಸಚಿವ ಕೆ ಸುಧಾಕರ್ ಮತ್ತು ನೂತನ ಶಾಸಕ ಪ್ರದೀಪ್ ಈಶ್ವರ್ ನಡುವಿನ ಮಾತಿನ ಸಮರ ಮತ್ತಷ್ಟು ಜೋರಾಗಿದೆ. ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾತನಾಡಿದ ಪ್ರದೀಪ್ ಈಶ್ವರ್, “ಮಾಜಿ ಸಚಿವ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದರೆ ಕಟ್ ಮಾಡುತ್ತೇನೆ. ಬೇಕಾದರೆ ಟ್ರೈ ಮಾಡುವುದಕ್ಕೆ ಹೇಳಿ” ಎಂದು ಸವಾಲು ಹಾಕಿದ್ದಾರೆ.

ಈ ಮೂಲಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳಾದರೂ ಚಿಕ್ಕಬಳ್ಳಾಪುರದಲ್ಲಿ ಮಾತ್ರ ಶಾಸಕ ವರ್ಸಸ್ ಮಾಜಿ ಸಚಿವರ ನಡುವಿನ ವಾಕ್ಸಮರ ಮಾತ್ರ ನಿಲ್ಲುತ್ತಿಲ್ಲ.

“ನಾನು ದ್ವೇಷ ರಾಜಕಾರಣ, ಗೂಂಡಾಗಿರಿ ರಾಜಕಾರಣ ಮಾಡಲ್ಲ, ಆದರೆ, ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ. ಕ್ಷೇತ್ರದಲ್ಲಿ ನನಗೆ ಸಿಕ್ಕ ಜನ ಬೆಂಬಲ ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಸುಧಾಕರ್​ ಸುಳ್ಳು ದೂರು ಕೊಡಿಸಿ ಗಲಭೆ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ವರ್ಷದಲ್ಲಿ ಚಿಕ್ಕಬಳ್ಳಾಪುರವನ್ನು ಮಾದರಿ ಕ್ಷೇತ್ರ ಮಾಡುತ್ತೇನೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ.​ ಪರ, ವಿರೋಧ ದೂರು ನೀಡಿದ್ದಾರೆ. ತನಿಖೆ ಆಗಿ ಸತ್ಯ ತಿಳಿಯಲಿ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜ್ಯಪಾಲರ ‘ವಿಮಾನ ಪ್ರಕರಣ’; ಮಾಧ್ಯಮಗಳ ಗೊಂದಲಗಳು ಮತ್ತು ಜನಸಾಮಾನ್ಯರ ಪ್ರಶ್ನೆಗಳು

“ಉಳಿದ ಶಾಸಕರ ರೀತಿ ನನಗೆ ರಾಜಕೀಯ ಅಭದ್ರತೆ ಇಲ್ಲ. ನಾನು ಶಾಸಕನಾಗಿದ್ದೇ ಲಾಟರಿ. ನಾನು ಯಾವುದೇ ರಾಜಕೀಯ ಗಿಮಿಕ್ ಮಾಡಲ್ಲ. ಮುಂದೆ ಯಾರಾದರೂ ಒಳ್ಳೆ ಕೆಲಸ ಮಾಡುತ್ತಾರೆ ಅಂದರೆ ಅವರಿಗೆ ಓಟು ಹಾಕಿ ಗೆಲ್ಲಿಸಿ. ನಾನು ಒಳ್ಳೆ ಕೆಲಸ ಮಾಡಿದರೆ ಮುಂದೆ ನನ್ನನ್ನು ಗೆಲ್ಲಿಸಲಿ” ಎಂದು ಹೇಳಿದರು.

“ಬೇರೆ ಶಾಸಕರ ರೀತಿ ನಾನು 20-30 ವರ್ಷ ಕಡಿದು ಕಟ್ಟೆ ಹಾಕುತ್ತೇನೆ ಅಂತ ಹೇಳಲ್ಲ. ಕ್ಷೇತ್ರದಲ್ಲಿ ತಪ್ಪು ಯಾರು ಮಾಡಿದರೂ ತಪ್ಪೇ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...