ಸುಳ್ಯ | ಸಂವಿಧಾನದ ಸಮರ್ಪಣಾ ದಿನದ ಪ್ರಯುಕ್ತ ನ.27ಕ್ಕೆ ತಾಲೂಕಿನಲ್ಲಿ ರಾಷ್ಟ್ರಧ್ವಜ ಗೌರವ ಯಾತ್ರೆ

Date:

ಪ್ರಜಾ ಧ್ವನಿ ಕರ್ನಾಟಕದ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆಯು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಸಂಘಟಕರು ತಿಳಿಸಿದ್ದಾರೆ.

ನ.27ರಂದು ಬೆಳಗ್ಗೆ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮವು ಸಂಪಾಜೆ ಗೇಟಿನ ಬಳಿ ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಯಾತ್ರೆಯ ಉದ್ಘಾಟನೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳಾ ಅವರು ನೆರವೇರಿಸಲಿದ್ದಾರೆ.

ಬಳಿಕ ರಾಷ್ಟ್ರ ಧ್ವಜವನ್ನು ಇರಿಸಿದ ಭವ್ಯ ವಾಹನ ಹಾಗೂ ಸಾರ್ವಜನಿಕರ ವಾಹನಗಳ ಮುಖಾಂತರ ಕಲ್ಲುಗುಂಡಿ, ಅರಂತೋಡು, ಮರ್ಕಂಜ, ಎಲಿಮಲೆ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ನಿಂತಿಕಲ್ಲು ಬೆಳ್ಳಾರೆ, ಐವರ್ನಾಡು, ಸೋಣಂಗೇರಿ, ಪೈಚಾರು ಕಡೆಗಳಲ್ಲಿ ಸಂವಿಧಾನದ ಮಹತ್ವವನ್ನು ಸಾರುತ್ತಾ ಸಾಗಿ ಬಂದು ಸುಳ್ಯದ ಜ್ಯೋತಿ ಸರ್ಕಲ್‌ನಿಂದ ಪಾದಯಾತ್ರೆಯ ಮೂಲಕ ಸಾಗಿ ಬರಲಿದೆ. ಬಳಿಕ ಗಾಂಧಿ ನಗರದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಭಾಷಣವನ್ನು ಖ್ಯಾತ ವಾಗ್ಮಿ, ಸಾಮಾಜಿಕ ಚಿಂತಕ ನಿಕೇತ್ ರಾಜ್ ಮೌರ್ಯ ಮಾಡಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮಹಾಪಾತ್ರ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡ ಇನಾಯತ್ ಅಲಿ, ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರಿಪ್ರಸಾದ್ ತುದಿಯಡ್ಕ, ಧಾರ್ಮಿಕ ಮುಖಂಡರಾದ ಸಯ್ಯದ್ ತ್ವಾಹಿರ್ ಸ‌ಅದಿ ಬಾಅಲವಿ ತಂಙಳ್, ಸುಳ್ಯದ ಸೈಂಟ್ ಬ್ರಿಜಿಡ್ಸ್ ಚರ್ಚ್‌ನ ಧರ್ಮ ಗುರು ಫಾದರ್ ವಿಕ್ಟರ್ ಡಿಸೋಜಾ, ಸುಳ್ಯ ಪ್ರಜಾಧ್ವನಿ ಸಂಚಾಲಕರಾದ ಗೋಪಾಲ್ ಪೆರಾಜೆ ಉಪಸ್ಥಿತರಿರಲಿದ್ದಾರೆ.

ಪ್ರತಿಯೊಬ್ಬ ವಾಹನ ಚಾಲಕ ಮಾಲಕರು, ಯಾವುದೇ ವಾಹನ ದಟ್ಟಣೆಗೆ ಅವಕಾಶ ನೀಡದಂತೆ, ರಸ್ತೆಯಲ್ಲಿ ಓವರ್ ಟೇಕ್ ಅಥವಾ ವಾಹನ ನಿಲ್ಲಿಸಿದಲ್ಲಿ ಇತರ ವಾಹನಕ್ಕೆ ತೊಂದರೆ ಆಗದಂತೆ ಸಾಂವಿಧಾನಿಕ ಗೌರವ ಕಾಪಾಡುವಂತೆ ಸಂಘಟಕರಾದ ಪ್ರಜಾಧ್ವನಿ ಕರ್ನಾಟಕದ ಮುಖಂಡರು ವಿನಂತಿಸಿಕೊಂಡಿದ್ದಾರೆ.

1002495670
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...