ಉಡುಪಿ | ಕಲಾಭಿಮಾನಿಗಳ ಪ್ರೋತ್ಸಾಹವಿಲ್ಲದೇ ಕಲೆಯಿಲ್ಲ : ದಿವಾಕರ ಸನಿಲ್‌

Date:

ಕಲಾಸಹೃದಯರ, ಕಲಾಭಿಮಾನಿಗಳ ಪ್ರೋತ್ಸಾಹ ಇಲ್ಲದೇ ಕಲಾ ಚಟುವಟಿಕೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಉದ್ಯಮಿ ದಿವಾಕರ ಸನಿಲ್‌ ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಟಕಗಳಲ್ಲಿ ಅಭಿನಯಿಸುವವರು ಕಣ್ಣ ಮುಂದೆ ಕಾಣುತ್ತಾರೆ. ಅದರ ಹಿಂದೆ ನಿಂತು ಕೆಲಸ ಮಾಡುವವರು ಕಾಣುವುದಿಲ್ಲ. ಈ ನಿಟ್ಟಿನಲ್ಲಿ ಸುಮನಸಾವು ನಟರನ್ನಷ್ಟೇ ಅಲ್ಲ, ಹಿನ್ನೆಲೆಯಲ್ಲಿ ಕೆಲಸ ಮಾಡುವವರನ್ನೂ ಗುರುತಿಸಿ ಗೌರವಿಸುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಮಿ ನವೀನ್‌ ಅಮಿನ್‌ ಶಂಕರಪುರ ಮಾತನಾಡಿ, ಕಲೆಯನ್ನು ಉಳಿಸುವ ಕೆಲಸವನ್ನು ಮಾಡುತ್ತಿರುವ ಅನೇಕ ಸಂಸ್ಥೆಗಳಲ್ಲಿ ಸುಮನಸಾ ಕೊಡವೂರು ವಿಶೇಷ ಸಂಘಟನೆಯಾಗಿದೆ. ಈ ಸಂಸ್ಥೆಯವರು ನಡೆಸುವ ನಾಟಕಗಳು ಮನೊರಂಜನೆಗೆ ಸೀಮಿತವಾಗಿಲ್ಲ. ಜೊತೆಗೆ ಒಳ್ಳೆಯ ಸಂದೇಶಗಳೂ ಇರುತ್ತವೆ. ಜೀವನದಲ್ಲಿ ನಡೆಯುವ ಘಟನೆಗಳನ್ನು ನೈಜವಾಗಿ ನಟಿಸಿ ತೋರುವ ಕಾರ್ಯ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಿಬಿರ ಮಾಡುತ್ತಾ ಅವರಲ್ಲಿಯೂ ಕಲಾಭಿರುಚಿ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಮಾತನಾಡಿ, ಕನಸು ಸ್ಪಷ್ಟವಾಗಿರಬೇಕು. ಕನಸನ್ನು ನನಸು ಮಾಡಲು ಹೋರಾಟ ನಡೆಸಬೇಕು. ಕಲೆಯನ್ನು ಮತ್ತೆ ಮತ್ತೆ ಪ್ರತಿಷ್ಠಾಪನೆ ಮಾಡುವ ಕೆಲಸ ಇಂಥ ರಂಗಹಬ್ಬಗಳು ಮಾಡುತ್ತಿವೆ. ಇತ್ತೀಚೆಗೆ ಇನ್ನೊಬ್ಬರನ್ನು ಬೆಳೆಸುವ ಪ್ರವೃತ್ತಿ ಕಡಿಮೆಯಾಗುತ್ತಿದೆ. ಸುಮನಸಾ ಸಂಸ್ಥೆಯು ಎಲ್ಲರನ್ನು ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದ್ಯಮಿ ಸಚಿನ್‌ ಕೊಡವೂರು ಮಾತನಾಡಿ, ಸಣ್ಣ ಮಟ್ಟದಲ್ಲಿ ಹುಟ್ಟಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಕಾಲೆಳೆಯುವವರು ಹೆಚ್ಚು ಇರುತ್ತಾರೆ. ಅವುಗಳನ್ನೆಲ್ಲ ಮೆಟ್ಟಿ ನಿಂತು ಮುಂದುವರಿದಿದೆ ಎಂದು ಹೇಳಿದರು.

ಮುಖವರ್ಣಿಕೆ ಕಲಾವಿದ ರಮೇಶ್ ಕೆ.ಪಣಿಯಾಡಿ ಅವರಿಗೆ ರಂಗಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.

ರೋಟರಿ ಮಾಜಿ ಸಹಾಯಕ ಗವರ್ನರ್‌ ಆನಂದ ಉದ್ಯಾವರ, ಶಶಿ ಎಂಟರ್‌ಪ್ರೈಸಸ್‌ ಪ್ರವರ್ತಕ ಜಗದೀಶ್‌ ಕುಮಾರ್‌, ಉದ್ಯಮಿಗಳಾದ ಸೂರಜ್‌ ಮಲ್ಪೆ, ರಂಜಿತ್‌ ಕೊಡವೂರು, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಯೊಗೀಶ್ ಕೊಳಲಗಿರಿ ಸ್ವಾಗತಿಸಿದರು. ಮನೋಹರ್‌ ಜತ್ತನ್‌ ವಂದಿಸಿದರು. ರಾಧಿಕಾ ದಿವಾಕರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...