ಉಡುಪಿ | ಜನರೇ ರಂಗಭೂಮಿಯನ್ನು ಬೆಳೆಸಬೇಕು – ವೆಂಕಟರಮಣ ಐತಾಳ್

Date:

ನಾಟಕಗಳಿಗೆ, ರಂಗಚಟುವಟಿಕೆಗಳಿಗೆ ಜನರ ಬೆಂಬಲದ ಜೊತೆಗೆ ಸರ್ಕಾರದಿಂದಲೂ ಪ್ರೋತ್ಸಾಹ ದೊರೆಯುತ್ತಿತ್ತು. ಅದು ನಿಂತು ಹೋಗಿದೆ. ಜನರೇ ರಂಗಭೂಮಿಯನ್ನು ಬೆಳೆಸಬೇಕಾದ ಕಾಲದಲ್ಲಿ ನಾವು ಇದ್ದೇವೆ ಎಂದು ಯಕ್ಷ ರಂಗಾಯಣ ಕಾರ್ಕಳ ಇದರ ಅಧ್ಯಕ್ಷ ಬಿ.ಆರ್. ವೆಂಕಟರಮಣ ಐತಾಳ್ ತಿಳಿಸಿದರು.

ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಮೂರನೇ ದಿನದ ಅಧ್ಯಕ್ಷತೆ ವಹಿಸಿ ಅವರು ಮಂಗಳವಾರ ಮಾತನಾಡಿದರು.

ಮಾತಿನ ಮೂಲಕ ಬೆನ್ನು ತಟ್ಟುವುದರ ಜೊತೆಗೆ ಆರ್ಥಿಕ ನೆರವು ಕೂಡ ನೀಡುವ ಮೂಲಕ ರಂಗ ಸಂಸ್ಥೆಗಳನ್ನು ಕಲಾ ಪ್ರೇಮಿಗಳು, ದಾನಿಗಳು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಭೂಮಿ ಈ ಹಿಂದಿನ ಎಲ್ಲ ಕಾಲಕ್ಕಿಂತ ವೇಗವಾಗಿ ಈಗ ಬೆಳೆಯುತ್ತಿದೆ. ಅದರ ಬೆಳವಣಿಗೆ ಎರಡು ರೀತಿಯಲ್ಲಿ ಆಗುತ್ತಿದೆ. ಸುಮನಸಾ ಕೊಡುವೂರು ಸಂಘಟನೆಯ ರೀತಿಯಲ್ಲಿ ಸಮಾಜದ ಒಳಿತಿಗೆ ಪೂರಕವಾಗಿ ಬೆಳೆಯುವ ಪ್ರಕ್ರಿಯೆ ನಡೆಯಬೇಕು ಎಂದರು.

ನಾಟಕ ಬರೆದವರನ್ನು, ನಿರ್ದೇಶಿಸಿದವರನ್ನು, ಅಭಿನಯಿಸಿದವರನ್ನು ಎಲ್ಲರೂ ಗುರುತಿಸುತ್ತಾರೆ. ಸನ್ಮಾನಿಸುತ್ತಾರೆ. ಆದರೆ, ಹಿನ್ನೆಲೆಯಲ್ಲಿದ್ದುಕೊಂಡು ಕೆಲಸ ಮಾಡುವವರನ್ನು ಗುರುತಿಸುವುದು ಕಡಿಮೆ. ನೇಪಥ್ಯದಲ್ಲಿ ಇರುವವರನ್ನೂ ಗುರುತಿಸುವ ಮೂಲಕ ವಿಶಿಷ್ಠ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮಾತನಾಡಿ, ಕಲಾವಿದರಿಗೆ ಜಾತಿ, ಮತ, ಪಂಥ, ಲಿಂಗದ ಭೇದ ಇರುವುದಿಲ್ಲ. ನಾಟಕದಲ್ಲಿ ಹೆಣ್ಣು ಗಂಡಾಗಬಹುದು. ಗಂಡು ಹೆಣ್ಣಾಗಬಹುದು. ನಾಟಕವು ಮನರಂಜನೆ ಮಾತ್ರವಾಗದೇ ಅರಿವು ಮೂಡಿಸುವ ಸಮಾಜಕ್ಕೆ ದಿಕ್ಕು ತೋರಿಸುವ ಪ್ರಕ್ರಿಯೆ ಎಂದು ಹೇಳಿದರು.

ರಂಗಸನ್ಮಾನ ಪಡೆದ ರಾಜು ಕಡೆಕಾರ್ ಅವರು ಕವನ ವಾಚನದ ಮೂಲಕ ಕೃತಜ್ಞತೆ ಸಲ್ಲಿಸಿದರು. ನಿರ್ಮಿತಿ ಕೇಂದ್ರದ ನಿರ್ದೇಶಕ ದಿವಾಕರ ಪೂಜಾರಿ ಅಂಬಲಪಾಡಿ, ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲಿಯಾನ್, ಕಲ್ಯಾಣಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣ ದೇವಾಡಿಗ, ಮಲ್ಪೆಯ ಉದ್ಯಮಿ ರವಿರಾಜ್ ತಿಂಗಳಾಯ, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಸ್ವಾಗತಿಸಿದರು. ಚಂದ್ರಕಾಂತ್ ಕಲ್ಮಾಡಿ ವಂದಿಸಿದರು. ರಾಧಿಕಾ ದಿವಾಕರ್ ಮತ್ತು ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅನಿಕೇತನ ಹಾಸನ ಕಲಾವಿದರು ‘ಕಿರಗೂರಿನ ಗಯ್ಯಾಳಿಗಳು” ನಾಟಕ ಪ್ರದರ್ಶಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...