ಉಡುಪಿ | ಮಲ್ಪೆ ಬಂದರಿನಲ್ಲಿ ಗೂಂಡಾಗಿರಿ ನಿಲ್ಲಬೇಕು: ಸುಂದರ ಮಾಸ್ತರ್ ಆಗ್ರಹ

Date:

ಮಲ್ಪೆ ಬಂದರಿನಲ್ಲಿ ಮೀನು ಏಲಂ ಮಾಡುವ ಕೂಲಿ ಕಾರ್ಮಿಕ ಶೇಖ್ ಅಯ್ಯೂಬ್ ಅವರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಪೆ ಬಂದರಿನೊಳಗೆ ತಮ್ಮ ಹೊಟ್ಟೆಪಾಡಿಗಾಗಿ ದುಡಿಯುತ್ತಿರುವ ಕೂಲಿ ಕಾರ್ಮಿಕರ ಮೇಲೆ ನಿರಂತರವಾಗಿ ಗೂಂಡಾಗಿರಿ ಮತ್ತು ಹಲ್ಲೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳು ಪೊಲೀಸ್ ಠಾಣೆ ವರೆಗೆ ತಲುಪುವುದು ಬಹಳ ಕಡಿಮೆ. ಬಲಾಡ್ಯರು ಮತ್ತು ಶ್ರೀಮಂತರು ಬಡ ಕೂಲಿ ಕಾರ್ಮಿಕರನ್ನು ಶೋಷಣೆ ಮಾಡುತ್ತಾ, ಭಯದ ವಾತಾವರಣ ನಿರ್ಮಿಸಿ ಅವರನ್ನು ತಮ್ಮ ಕಪಿಮುಷ್ಠಿಯೊಳಗೆ ಇಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರದ ಹಣದಿಂದ ನಿರ್ಮಿತವಾದ ಬಂದರು ಪ್ರದೇಶವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿರುವುದು ಅಹಂಕಾರಪೂರ್ಣ ನಡವಳಿಕೆಯಾಗಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಕಳೆದ ವರ್ಷ ಕೂಲಿ ಕಾರ್ಮಿಕ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ ಆರೋಪಿಗಳು ರಾಜಕೀಯ ಪ್ರಭಾವ ಮತ್ತು ಹಣದ ಬಲ ಬಳಸಿ ಸಂತ್ರಸ್ತೆಯಿಂದಲೇ ಪ್ರಕರಣವನ್ನು ಹಿಂಪಡೆಯುವಂತೆ ಮಾಡಿದ ಘಟನೆ ನಡೆದಿದೆ. ಇದರ ಪರಿಣಾಮವಾಗಿ ಕಾನೂನು ನಿರ್ಲಕ್ಷ್ಯಕ್ಕೊಳಗಾದಂತೆ ಕಂಡುಬಂದಿದ್ದು, ಇಂತಹ ಹಲ್ಲೆ ಹಾಗೂ ಗೂಂಡಾಗಿರಿ ಮರುಕಳಿಸಲು ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಪೆ ಬಂದರಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಯಾವುದೇ ಭಯವಿಲ್ಲದೆ, ಸ್ವತಂತ್ರವಾಗಿ ಮತ್ತು ನೆಮ್ಮದಿಯಿಂದ ದುಡಿದು ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದಕ್ಕಾಗಿ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಹಾಗೂ ಗೂಂಡಾಗಿರಿ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬಡವರು ಹಾಗೂ ಕೂಲಿ ಕಾರ್ಮಿಕರ ಮೇಲೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ ಎಂದು ಸುಂದರ ಮಾಸ್ತರ್ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...