ಉಡುಪಿ | ಸರ್ವಾಧಿಕಾರ ಎದುರಿಸಲು ಸಂಘಟಿತ ಹೋರಾಟದ ಅಗತ್ಯವಿದೆ : ಸುಂದರ್ ಮಾಸ್ತರ್

Date:

ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಅಲುಗಾಡಿಸುವ ಪ್ರಯತ್ನಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಸಂವಿಧಾನ, ಅಂಬೇಡ್ಕರ್‌ ಚಿಂತನೆ, ಸಾಮಾಜಿಕ ನ್ಯಾಯ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಕರ್ನಾಟಕ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.

ಅವರು ಇಂದು ಬ್ರಹ್ಮಾವರದ ಆಶ್ರಯ ಹೋಟೆಲ್ ಸಭಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಉಡುಪಿ ಜಿಲ್ಲಾ ಸಮಿತಿಯ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಶೋಷಿತ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

WhatsApp Image 2025 11 23 at 7.44.50 PM 1

ದೇಶದಲ್ಲಿ ಸರ್ವಾಧಿಕಾರಿ ಧೋರಣೆಯ ರಾಜಕಾರಣ, ಜನವಿರೋಧಿ ಸರಕಾರ ಬಲವಾಗುತ್ತಿರುವುದರಿಂದ ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತರ ಏಕತೆ ಪ್ರಜಾಪ್ರಭುತ್ವವನ್ನು ಉಳಿಸಲು ಅತ್ಯವಶ್ಯಕ ಎಂದು ಅವರು ಹೇಳಿದರು. “ಬೆಲೆ ಏರಿಕೆ, ಶೋಷಣೆ, ದೌರ್ಜನ್ಯ ಕಡಿಮೆಯಾಗದ ಪರಿಸ್ಥಿತಿಯಲ್ಲೂ ಸರ್ವಾಧಿಕಾರಕ್ಕೆ ಜನರು ಮಾನ್ಯತೆ ನೀಡುತ್ತಿರುವುದು ದುರಂತ,” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಯಾಗಿ ಆಗಮಿಸಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸಂವಿಧಾನ ನೀಡಿರುವ ಮೌಲ್ಯಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಸಂಘಟಿತ ಚಳುವಳಿಗಳ ಮೂಲಕ ದಸಂಸ ಧ್ವನಿಯಿಲ್ಲದವರ ಧ್ವನಿಯಾಗುತ್ತಿದೆ ಎಂದು ಪ್ರಶಂಸಿಸಿದರು.

WhatsApp Image 2025 11 23 at 7.44.51 PM 1

ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಪ್ರಾಸ್ತವಿಕವಾಗಿ ಮಾತನಾಡಿ, ದಸಂಸ ಚಳುವಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು. ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಂಘಟನೆ ಸಕ್ರಿಯವಾಗಿ ಜನಪರ ಹೋರಾಟ ನಡೆಸುತ್ತಿದ್ದು, ಸಮಸಮಾಜದ ಗುರಿಯತ್ತ ಹೋರಾಟದ ರಥವನ್ನು ಗ್ರಾಮಾಂತರಕ್ಕೆ ವಿಸ್ತರಿಸುವ ಯೋಜನೆ ಮುಂದುವರಿದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾಲೂಕು ನಿಯೋಜಿತ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ ಹಾಗೂ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ದಲಿತಪರ ಹೋರಾಟಗಾರರು ಮತ್ತು ಸಾಧಕರಿಗೆ ಸನ್ಮಾನ ಸಲ್ಲಿಸಲಾಯಿತು.

WhatsApp Image 2025 11 23 at 7.44.49 PM 1

ಕಾರ್ಯಕ್ರಮದಲ್ಲಿ ಪ್ರಸಾದ್‌ ರಾಜ್ ಕಾಂಚನ್, ಎಸ್. ನಾರಾಯಣ್, ಪ್ರಶಾಂತ್ ಜತ್ತನ್, ಶ್ಯಾಮರಾಜ್ ಬಿರ್ತಿ, ಅಣ್ಣಪ್ಪ ನಕ್ರೆ, ಮಂಜುನಾಥ ನಾಗೂರು, ಸುರೇಶ್ ಹಕ್ಲಾಡಿ, ಅಣ್ಣಪ್ಪ ಮಾರ್ಸ್ತ ಹೆಬ್ರಿ, ಭಾಸ್ಕರ್ ನಿಟ್ಟೂರು, ಕುರ್ಮಾ ಕೋಟ, ಕೆ.ಸಿ.ರಾಜು ಬೆಟ್ಟಿನಮನೆ, ಶಿವರಾಜ್, ರಾಘವ ಕುಕ್ಕುಜೆ, ಶಂಕರದಾಸ್ ಚೇಂಡ್ಕಳ, ದೇವು ಹೆಬ್ರಿ, ರಾಜೇಂದ್ರನಾಥ್, ಗೀತಾ ಸುರೇಶ್ ಕುಮಾರ್, ವಸಂತಿ ಶಿವಾನಂದ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 23 at 7.44.49 PM
WhatsApp Image 2025 11 23 at 7.44.48 PM 1
WhatsApp Image 2025 11 23 at 7.44.47 PM 1
WhatsApp Image 2025 11 23 at 7.44.50 PM
WhatsApp Image 2025 11 23 at 7.44.48 PM
WhatsApp Image 2025 11 23 at 7.44.47 PM 1 1
WhatsApp Image 2025 11 23 at 7.44.47 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...