ಉಡುಪಿ | ಲೈಂಗಿಕ ಕಿರುಕುಳ ಆರೋಪ, ಜಿಲ್ಲಾ ಸರ್ಜನ್ ತಕ್ಷಣ ವರ್ಗಾವಣೆಗೆ ದ.ಸಂ.ಸ. ಅಂಬೇಡ್ಕರ್ ವಾದ ಆಗ್ರಹ

Date:

ಲೈಂಗಿಕ ಕಿರುಕುಳದ ಆರೋಪಗಳಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್‌ರವರನ್ನು ತಪ್ಪಿತಸ್ಥರಾಗಿ ಸರ್ಕಾರದ ಆದೇಶ ಸಂಖ್ಯೆ: ಆಕುಕ117/MSA/2022 ದಿನಾಂಕ 03.02.2024ರಂದು ಐದು ಇನ್‌ಕ್ರಿಮೆಂಟ್ ಕಡಿತಗೊಳಿಸುವ ಶಿಕ್ಷೆಗೆ ಒಳಪಡಿಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಹುದ್ದೆಯಿಂದ ಹಿಂತೆಗೆದು ಬೆಂಗಳೂರಿನ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.

ಸರ್ಜನ್‌ರವರ ವರ್ಗಾವಣೆಯನ್ನು ರದ್ದತಿಗಾಗಿ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದರೂ ನ್ಯಾಯಮಂಡಳಿ ಪ್ರಕರಣ ಸಂಖ್ಯೆ: 619/2025ರಂತೆ ಇದೇ ತಿಂಗಳಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಯಾವುದೇ ಪದೋನ್ನತಿಗೆ ಅರ್ಹರಲ್ಲದ ಇವರು ವರ್ಗಾವಣೆಗೊಂಡಿದ್ದರೂ, ಅದೇ ಹುದ್ದೆಯಲ್ಲಿ ಮುಂದುವರಿಯುತ್ತಿರುವುದನ್ನು ಕರ್ನಾಟಕ ದಲಿತ ಸಂಘಟನಾ ಸಮಿತಿ ಅಂಬೇಡ್ಕರವಾದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ತೀವ್ರವಾಗಿ ಖಂಡಿಸಿದ್ದಾರೆ.

ಸರ್ಜನ್ ಡಾ| ಅಶೋಕ್‌ರವರು ಉಡುಪಿಯ ಆಸ್ಪತ್ರೆಯಲ್ಲೂ ಈ ರೀತಿ ಮಹಿಳಾ ಪೀಡಿತರಾಗಿದ್ದು, ಈ ಬಗ್ಗೆ ಅವರ ಮೇಲೆ ಸಂಬಂಧಪಟ್ಟ ಇಲಾಖೆ, ಸಂಘಟನೆಗಳಿಗೂ ದೂರು ಬಂದಿರುತ್ತದೆ. ಜಿಲ್ಲಾ ಶಸ್ತ್ರಚಿಕಿತ್ಸಕ ಹುದ್ದೆಗೆ ಯಾವುದೇ ಅರ್ಹತೆ ಹೊಂದಿರದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ತಪ್ಪಿತಸ್ಥರೆಂದು ಸಾಬೀತಾಗಿ ವರ್ಗಾವಣೆಗೊಂಡಿರುವ ಹಾಗೂ ಕೆ.ಎ.ಟಿಯಲ್ಲಿ ಅವರ ಪ್ರಕರಣ ತಿರಸ್ಕೃತಗೊಂಡಿರುವುದರಿಂದ ಅವರನ್ನು ತಕ್ಷಣದಿಂದ ಜಿಲ್ಲಾ ಸರ್ಜನ್ ಹುದ್ದೆಯಿಂದ ತಕ್ಷಣ ವರ್ಗಾವಣೆಗೊಳಿಸಬೇಕು. ಈ ಬಗ್ಗೆ ಸರ್ಕಾರ ವಿಳಂಬ ತೋರಿದಲ್ಲಿ ಜಿಲ್ಲಾಸ್ಪತ್ರೆಯ ಎದುರು ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...