ಉಡುಪಿ | ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧ ಸಂಪುಟ ನಿರ್ಧಾರ ಸ್ವಾಗತಾರ್ಹ: ಸುಂದರ ಮಾಸ್ತರ್

Date:

ಮುಗ್ಧ ಎಳೆಯ ಮಕ್ಕಳ ಮನಸ್ಸಿನಲ್ಲಿ ವರ್ಣ ವ್ಯವಸ್ಥೆಯೇ, ಜಾತೀಯತೆಯೇ, ಅಸಮಾನತೆಯೇ ಮೂಲ ಮಂತ್ರ ವಾಗಿರುವ ಸನಾನತನ ಧರ್ಮದ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ನ್ನು ಸರಕಾರಿ ಸ್ಥಳಗಳಲ್ಲಿ ನಿಷೇಧಿಸಿರುವ ಕರ್ನಾಟಕ ಸರಕಾರದ ದಿಟ್ಟ ಕ್ರಮಕ್ಕೆ ಅಬಿನಂಧನೆಗಳು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ತಿಳಿಸಿದ್ದಾರೆ.

ನೊಂದಾವಣಿಯೇ ಆಗದಂತ ಸಂಘ ಇಡೀ ದೇಶದಲ್ಲಿ ಗುಂಪು ಕಟ್ಟಿಕೊಂಡು ರಾಜಾರೋಷವಾಗಿ ಲಾಠಿ ಹಿಡಿದು ರಸ್ತೆ ರಸ್ತೆಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಭಯೋತ್ಪಾದನೆ ಸೃಷ್ಠಿ ಮಾಡುತ್ತಿದೆ. ತಮ್ಮ ಸನಾತನ ಧರ್ಮ ವನ್ನು ಒಪ್ಪಿಕೊಳ್ಳದ, ಟೀಕಿಸುವವರನ್ನು ಕೊಲ್ಲುವ ಮಟ್ಟದ ಮನಸ್ಥಿತಿಯನ್ನು ಈ ಆರ್‌ಎಸ್‌ಎಸ್ ಸಂಘಗಳು ಬೆಳೆಸುತ್ತದೆ. ಈಗ ಪ್ರಿಯಾಂಕ ಖರ್ಗೆಯವರಿಗೂ ಎಡೆಬಿಡದೆ ಬೆದರಿಕೆ ಕರೆಗಳು ಬರುತ್ತಿವೆ. ಇದು ಖಂಡನೀಯ ಎಂದು ಅವರು ಹೇಳಿದ್ದಾರೆ.

ನಾವು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ನಾವು ಬಧ್ದರಾಗಿದ್ದೇವೆ. ನಮ್ಮ ತಾಳ್ಮೆ ಮತ್ತು ಸಹನೆಯನ್ನು ಕೆಣಕಬೇಡಿ. ಪ್ರಾಥಮಿಕ ಶಾಲೆಗೆ ಹೋಗುವ ನಿಶ್ಕಲ್ಮಶ ಮುಗ್ಧ ಮಕ್ಕಳ ಮನಸ್ಸಿನಲ್ಲಿ ಈ ರೀತಿಯ ಧ್ವೇಷ ಭಾವನೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನು ಈ ಆರೆಸ್ಸೆಸ್ ಮಾಡುತ್ತಿದೆ. ಈ ಧರ್ಮಾಧಾರಿತ ಸಂಘಟನೆ ಗಳಿಂದ ಬುಧ್ಧ ಹುಟ್ಟಿದ ನಾಡು, ಗಾಂಧಿಜೀ ಹುಟ್ಟಿದ ನಾಡಿನಲ್ಲಿ ಸಹನೆ, ಶಾಂತಿ, ಸಹಭಾಳ್ವೆ ಮಾಯವಾಗಿ ದೇಶಾಧ್ಯಂತ ಒಂದು ರೀತಿಯ ಆತಂಕ, ಅಸಹಿಷ್ಣುತೆ, ಧ್ವೇಷ ಭಾವನೆ ವ್ಯಾಪಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಕೆಡುಕುಗಳಿಂದ ಮುಕ್ತವಾಗಲು ಸನಾತನ ಧರ್ಮದ ಅಫೀಮನ್ನು ತುಂಬುವ ಆರ್‌ಎಸ್‌ಎಸ್‌ನ ಚಟುವಟಿಕೆ ಗಳನ್ನು ಸರಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ಸುಂದರ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...