ಧಾರವಾಡ | 15 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಮಧ್ಯ ರಾತ್ರಿ ಮಹಿಳೆಯರಿಂದ ರಸ್ತೆ ತಡೆ ಪ್ರತಿಭಟನೆ

Date:

  • ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ
  • ಎರಡು ಗಂಟೆ ಕಾಲ ರಸ್ತೆ ತಡೆ; ಪಿ.ಬಿ ರಸ್ತೆಯಲ್ಲಿ ಸಂಚಾರ ದಟ್ಟಣೆ

ಬೇಸಿಗೆ ಆರಂಭವಾಗುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಧಾರವಾಡದ ಕೆಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಡರಾತ್ರಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ಹದಿನೈದು ದಿನಗಳಿಗೊಮ್ಮೆ, ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಇದರಿಂದ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ಜಲಮಂಡಳಿಯಿಂದ ಖಾಸಗಿ ‘ಎಲ್ ಆ್ಯಂಡ್ ಟಿ’ ಕಂಪನಿಗೆ ನೀಡಿ ಪಾಲಿಕೆ ಕೈತೊಳೆದುಕೊಂಡಿತ್ತು. ಈ ಪ್ರಕ್ರಿಯೆ ನಡೆದು ಆರೇಳು ತಿಂಗಳುಗಳೇ ಕಳೆದಿದೆ. ಆದರೆ, ನೀರು ಪೂರೈಸುವ ಜವಾಬ್ದಾರಿ ಹೊತ್ತ ಎಲ್ಆಂಡ್ ಟಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ” ಎಂದು ಸ್ಥಳೀಯರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಡೆದ ಪೈಪ್ ಲೈನ್‌ಗಳ ದುರಸ್ತಿ ಮಾಡುತ್ತಿಲ್ಲ. ಈಗಾಗಲೇ ಜಲಮಂಡಳಿ ಮೂಲಕ ನೀರು ಪೂರೈಸುತ್ತಿದ್ದ ಸಿಬ್ಬಂದಿ ಕೆಲಸದಿಂದ ತೆಗೆದುಹಾಕಿದೆ. ಆದರೆ, ಆ ಜಾಗಕ್ಕೆ ಮತ್ತೆ ಸಿಬ್ಬಂದಿ ನೇಮಕಗೊಂಡಿಲ್ಲ. ಇದರಿಂದ ನೀರು ಪೂರೈಕೆ ಹಲವು ಸಮಸ್ಯೆ ಎದುರಾಗುತ್ತಲೇ ಇದೆ. ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಆದರೆ, ನಲ್ಲಿಯಲ್ಲಿ ನೀರು ಮಾತ್ರ ಬರುತ್ತಿಲ್ಲ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜನಪ್ರತಿನಿಧಿಗಳು ಕೂಡಲೇ ತಮ್ಮ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಕೆಲಗೇರಿ ಜನರ ಆಗ್ರಹಿಸಿದ್ದಾರೆ.

“ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ತೀವ್ರವಾದ ಪ್ರತಿಭಟನೆ ಮಾಡಲಾಗುವುದು” ಎಂದು ಪ್ರತಿಭಟನಕಾರರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕುಡಿಯಲು ನೀರು ಸರಬರಾಜು ಮಾಡುವವರೆಗೂ ರಸ್ತೆ ತಡೆ ನಡೆಸುವುದಾಗಿ ಪಟ್ಟು ಹಿಡಿದರು.

ಸಾರ್ವಜನಿಕರು ಪಿ.ಬಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ಮಾಡಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುಮಾರು ಎರಡು ಗಂಟೆಗೂ ಅಧಿಕ ಕಾಲ ನೂರಾರು ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ವಾಹನ ದಟ್ಟಣೆ ಹೆಚ್ಚಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ, ಸಂಚಾರ ದಟ್ಟಣೆಯನ್ನು ನಿವಾರಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...