ಸುರತ್ಕಲ್‌ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್‌ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್

Date:

ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಾರಿ ಚಾಲಕ ಹಾಗೂ ರಾಷ್ಟ್ರೀಯ ಹೆದ್ದಾರಿ(ಎನ್‌ಎಚ್) ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಕುಳಾಯಿ ನಿವಾಸಿ ಮಾಧವಿ(44) ಅವರು ತಮ್ಮ ಸ್ಕೂಟರಿನಲ್ಲಿ ಕುಳಾಯಿ ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದರು. ಬೆಳಿಗ್ಗೆ 8.30ರ ಸುಮಾರಿನಲ್ಲಿ ಕೂಳೂರಿನ ರಾಯಲ್ ಓಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯ ಪರಿಣಾಮ ಸ್ಕೂಟರ್ ಸಹಿತ ಅದರಲ್ಲಿ ಬಿದ್ದರು. ಈ ವೇಳೆ ಹಿಂಬದಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯ ಚಾಲಕ ಮೊಹಮ್ಮದ್ ಫಾರೂಕ್ ಎಂಬುವವರ ಅಜಾಗರೂಕತೆ ಚಾಲನೆಯಿಂದ ರಸ್ತೆಯಲ್ಲಿ ಬಿದ್ದಿದ್ದ ಮಾಧವಿಯವರ ಮೇಲೆ ಲಾರಿ ಹರಿದಿದೆ. ಈ ಹಿನ್ನೆಲೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮದ್ದೂರು | ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಬಲಿಯಾಗದಂತೆ ಸಾರ್ವಜನಿಕರಲ್ಲಿ ಸಿಪಿಐಎಂ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಿಯಾಗಿ ಹೆದ್ದಾರಿಯ ನಿರ್ವಹಣೆ ಮಾಡದೆ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚದಿರುವ ನಿರ್ಲಕ್ಷ್ಯತನವೇ ಈ ಅಪಘಾತಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯವರ ಮೇಲೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿರುವ ಲಾರಿ ಚಾಲಕನ ಮೇಲೆ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 224/2025 ಕಲಂ 281, 106(1) ಬಿಎನ್‌ಎಸ್‌ ಮತ್ತು 198(ಎ) ಐಎಂವಿ ಕಾಯ್ದೆಯನ್ವಯ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಿರುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...