ಉಡುಪಿ ಅಭಿವೃದ್ಧಿಗೆ ಶೂನ್ಯ ಭರವಸೆ: ಸರ್ಕಾರದ ಬಜೆಟ್ ವಿರುದ್ಧ ಸಿಪಿಐ(ಎಂ)

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಉಡುಪಿ ಜಿಲ್ಲೆಯ ಜನತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಮತ್ತೊಂದು ದಾಖಲೆಯ ಬಜೆಟ್ ಆಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಜನರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದರೂ ಹಾಗೂ ಹೋರಾಟ ನಡೆಸುತ್ತಿದ್ದರೂ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೊಸ ತಾಲೂಕುಗಳು ರಚನೆಯಾಗಿ ಹಲವು ವರ್ಷಗಳು ಕಳೆದಿದ್ದರೂ ಅವುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸದ ಕಾರಣ ಜನರು ಇನ್ನೂ ಹಳೆಯ ತಾಲೂಕು ಕೇಂದ್ರಗಳ ಪ್ರಮುಖ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಮುಂದುವರಿದಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಂದೂರು ತಾಲೂಕಿನಲ್ಲಿ ನ್ಯಾಯಾಲಯ, ತಾಲೂಕು ಆಸ್ಪತ್ರೆ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿ ಮಂಜೂರು ಮಾಡಿಲ್ಲ. ಬ್ರಹ್ಮಾವರ ತಾಲೂಕಿಗೂ ಇದೇ ರೀತಿಯಲ್ಲಿ ಸರ್ಕಾರ ಆದ್ಯತೆ ನೀಡಿಲ್ಲ ಎಂದು ಕಲ್ಲಾಗರ ಟೀಕಿಸಿದ್ದಾರೆ.

ಸಿದ್ದಾಪುರ ಸೇರಿದಂತೆ ಜಿಲ್ಲೆಯಲ್ಲಿ ಅನೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಕಷ್ಟು ಸರ್ಕಾರಿ ಭೂಮಿ ಮತ್ತು ಕಟ್ಟಡಗಳಿದ್ದರೂ ಅವುಗಳನ್ನು ಮೇಲ್ದರ್ಜೆಗೆ ಏರಿಸುವುದು ಅಥವಾ ಪ್ರತಿದಿನ ವೈದ್ಯರನ್ನು ನೇಮಿಸುವ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದರು.

ಉಡುಪಿ ತಾಲೂಕಿನಲ್ಲಿ ಕುಡಿಯುವ ನೀರಿನ ನಿರಂತರ ಸಮಸ್ಯೆ ಪರಿಹರಿಸುವ ಬಗ್ಗೆ ಪ್ರಸ್ತಾಪವಿಲ್ಲ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಾಗೂ ಬ್ರಹ್ಮಾವರ ಕೃಷಿ ಕಾಲೇಜನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಯಾವುದೇ ಯೋಜನೆ ಘೋಷಿಸಲಿಲ್ಲ. ಕೋಡಿ–ಕುಂದಾಪುರ ಸೇತುವೆ ನಿರ್ಮಾಣಕ್ಕೂ ಬಜೆಟ್‌ನಲ್ಲಿ ಪ್ರಸ್ತಾಪ ಇಲ್ಲ ಎಂದು ಅವರು ಹೇಳಿದ್ದಾರೆ.

ನಗರಗಳು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆ ಪುರಸಭಾ ವ್ಯಾಪ್ತಿಯಲ್ಲಿ ಕೊಳಚೆ ನೀರಿನ ವಿಲೇವಾರಿಗೆ ಅಗತ್ಯ ಕ್ರಮಗಳ ಬಗ್ಗೆ ಯಾವುದೇ ಯೋಜನೆ ಪ್ರಕಟಿಸಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಬಸ್ ಸೇವೆ ಒದಗಿಸಲು ಜನರು ಹೋರಾಟ ನಡೆಸುತ್ತಿದ್ದರೂ ಅದಕ್ಕೂ ಬಜೆಟ್‌ನಲ್ಲಿ ಸ್ಪಂದನೆ ದೊರಕಿಲ್ಲ ಎಂದು ಅವರು ದೂರಿದರು.

ಖಾಸಗಿ ಸಾರಿಗೆ ಚಾಲಕರಿಗೆ ಹಾಗೂ ಮೀನುಗಾರರಿಗೆ ಕಲ್ಯಾಣ ಮಂಡಳಿ ರಚಿಸುವ ಬೇಡಿಕೆಯನ್ನು ಸರ್ಕಾರ ಪರಿಗಣಿಸಿಲ್ಲ. ಗಂಗೊಳ್ಳಿ ಮತ್ತು ಮಲ್ಪೆ ಬಂದರುಗಳನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಅವರು ಹೇಳಿದರು.

ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಬಂದರುಗಳನ್ನು ಖಾಸಗೀಕರಣ ಮಾಡುವ ಸಂಚು ಬಜೆಟ್‌ನಲ್ಲಿ ಕಾಣಿಸುತ್ತಿದೆ ಎಂದು ಸಿಪಿಐ(ಎಂ) ಆರೋಪಿಸಿದೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣಕ್ಕೆ ಬಳಸುವ ಯೋಜನೆ ಕಮಿಷನ್ ಉದ್ದೇಶಿತ ದಂಧೆಯಾಗಿದೆ. ಅದರ ಬದಲಿಗೆ ಕಳೆದ ಮೂರು ವರ್ಷಗಳಿಂದ ಬಾಕಿ ಇರುವ ಶೈಕ್ಷಣಿಕ ಧನಸಹಾಯವನ್ನು ಕಾರ್ಮಿಕರ ಮಕ್ಕಳಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದು ಕಲ್ಲಾಗರ ಹೇಳಿದರು.

ಕಾರ್ಮಿಕರ ಭದ್ರತೆ, ಅಪಾಯಕಾರಿ ಲೇಬರ್ ಕೋಡ್ ವಿರುದ್ಧ ರಕ್ಷಣಾತ್ಮಕ ಕ್ರಮಗಳು, ಜಿಲ್ಲೆಯಲ್ಲಿನ ಸರ್ಕಾರಿ ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಯಾವುದೇ ಪ್ರಮುಖ ವಿಷಯಗಳಿಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ. ಕರಾವಳಿಯ ರೈತರ ಬೆಳೆಗಳಿಗೆ ಭದ್ರತೆ ನೀಡುವ ಕ್ರಮಗಳೂ ಕಾಣುತ್ತಿಲ್ಲ. ಮಹಿಳೆಯರ ರಕ್ಷಣೆಗೆ ಕಠಿಣ ಕ್ರಮಗಳೂ ಇಲ್ಲ ಎಂದು ಅವರು ಟೀಕಿಸಿದರು.

ಸಂಪೂರ್ಣವಾಗಿ ಜನವಿರೋಧಿ ಸ್ವರೂಪದ ಬಜೆಟ್ ಇದಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...