ಉಡುಪಿ | ಐದು ವರ್ಷಗಳ ಬಿಜೆಪಿ ಆಡಳಿತ ನಗರಸಭೆಯನ್ನು ಭ್ರಷ್ಟಾಚಾರ, ಅಭಿವೃದ್ಧಿಹೀನತೆಗೆ ತಳ್ಳಿದೆ : ಸುರೇಶ್ ಶೆಟ್ಟಿ

Date:

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಬಿಜೆಪಿಯ ಆಡಳಿತಕ್ಕೆ ಒಳಪಟ್ಟಿದ್ದು, ಈ ಅವಧಿಯಲ್ಲಿ ನಗರಸಭೆ ಭ್ರಷ್ಟಾಚಾರದಿಂದ ತುಂಬಿ ತುಳುಕಿದೆ ಹಾಗೂ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರು ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಅವರು ಆರೋಪಿಸಿದ್ದಾರೆ.

ತಮ್ಮ ಆಡಳಿತ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಬಿಜೆಪಿಯ ಮಾಜಿ ಅಧ್ಯಕ್ಷರು ಹಾಗೂ ನಗರಸಭಾ ಸದಸ್ಯರು, ನಗರಸಭೆಯ ಅಧಿಕಾರಿಗಳು ಮತ್ತು ನೌಕರರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಉಡುಪಿ ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇದು ಜನರನ್ನು ಮೋಸಗೊಳಿಸುವ ನೇರ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.

ಐದು ವರ್ಷಗಳ ಅವಧಿಯಲ್ಲಿ ಉಡುಪಿ ನಗರಸಭೆಗೆ ಇಬ್ಬರು ಅಧ್ಯಕ್ಷರು ಹಾಗೂ ಇಬ್ಬರು ಶಾಸಕರು ಬಿಜೆಪಿಯವರೇ ಇದ್ದರೂ ನಗರಸಭಾ ವ್ಯಾಪ್ತಿಯ ಯಾವುದೇ ವಾರ್ಡಿನಲ್ಲಿಯೂ ಅಭಿವೃದ್ಧಿ ಕಂಡುಬಂದಿಲ್ಲ. ಪರಿಣಾಮವಾಗಿ ಉಡುಪಿ ನಗರಸಭೆ ಇಂದು ‘ಅಭಿವೃದ್ಧಿಹೀನ ನಗರಸಭೆ’ ಎಂಬ ದುಷ್ಟನಾಮಕ್ಕೆ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆಯನ್ನು ಗುಡಿಸಿ ಗುಂಡಾಂತರ ಮಾಡಿದ ಬಿಜೆಪಿಯವರು ಇದೀಗ ತಮ್ಮ ತಪ್ಪುಗಳನ್ನು ಮರೆಮಾಚಲು ಅಧಿಕಾರಿಗಳು ಹಾಗೂ ನೌಕರರ ಮೇಲೆ ಆರೋಪ ಹೊರಿಸುತ್ತಿದ್ದು, ಇದನ್ನು ಉಡುಪಿ ಜನತೆ ಸಹಿಸುವುದಿಲ್ಲ. ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳ ಮತದಾರರು ಬಿಜೆಪಿಯ ಸುಳ್ಳು ಹೇಳಿಕೆಗಳಿಗೆ ಮರುಳಾಗದೆ, ಮುಂದಿನ ಚುನಾವಣೆಯಲ್ಲಿ ಮತದಾನದ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...