ಉಡುಪಿ | ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ; ಬಿಜೆಪಿ ಪ್ರತಿಕ್ರಿಯೆ ಅನಾವಶ್ಯಕ : ಸುರೇಶ್ ಶೆಟ್ಟಿ

Date:

ರಾಜ್ಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಇತ್ತೀಚೆಗೆ ಆರ್ ಎಸ್ ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸುತ್ತಿರುವುದು ಅನಾವಶ್ಯಕ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಸಂಘಟನೆ ರಾಜಕೀಯ ಪಕ್ಷವಲ್ಲವೆಂದು ಹಲವು ಬಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಹೀಗಿರುವಾಗ ಸಚಿವರು ಸಂಘಟನೆ ಕುರಿತು ಪ್ರಶ್ನೆ ಮಾಡಿದಾಗ ಭಾರತೀಯ ಜನತಾ ಪಕ್ಷ ನಾಯಕರು ತೀವ್ರ ಪ್ರತಿಕ್ರಿಯೆ ನೀಡುತ್ತಿರುವುದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಸಂಬಂಧವಿಲ್ಲವೆಂದು ಹೇಳಲಾಗುತ್ತಿದ್ದರೂ, ಪ್ರಸ್ತುತ ರಾಜಕೀಯ ಪ್ರತಿಕ್ರಿಯೆಗಳು ಎರಡೂ ಸಂಘಟನೆಗಳು ಪರಸ್ಪರ ಸಂಬಂಧ ಹೊಂದಿರುವಂತೆ ತೋರುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್‌ಗೆ ಬಂದ ದೇಣಿಗೆಯ ಕುರಿತು ಸಚಿವ ಪ್ರಿಯಾಂಕ ಖರ್ಗೆ ಅವರು ಕೇಳಿರುವ ಪ್ರಶ್ನೆಯೇ ಬಿಜೆಪಿ ನಾಯಕರಿಗೆ ತಲೆನೋವಾಗಿದ್ದು, ಅದರ ಹಿನ್ನೆಲೆಯಲ್ಲಿಯೇ ನಿರಂತರವಾಗಿ ಸಚಿವರ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಳ್ಳುವುದನ್ನು ಬಿಟ್ಟು, ರಾಜ್ಯದಲ್ಲಿ ಜಾತ್ಯಾತೀತ ನೆಲೆಯಲ್ಲಿ ಶಾಂತಿ ಮತ್ತು ಸಹಬಾಳ್ವೆಯನ್ನು ಕಾಪಾಡುವ ದಿಕ್ಕಿನಲ್ಲಿ ಕೆಲಸ ಮಾಡುವುದು ಅಗತ್ಯವಾಗಿದೆ. ನಾವು ಎಲ್ಲರೂ ಭಾರತೀಯರು ಎಂಬ ಭಾವನೆ ಸಮಾಜದಲ್ಲಿ ಬಲವಾಗಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...