ಬೀದರ್‌ | ಕನ್ನಡ ಸಾಹಿತ್ಯದ ಹಿರಿಮೆ ಹೆಚ್ಚಿಸಿದ ಶರಣರು : ಗುರುಬಸವ ಪಟ್ಟದ್ದೇವರು

Date:

ಕನ್ನಡ ಭಾಷೆ, ಅತ್ಯಂತ ಪ್ರಾಚೀನವಾಗಿರುವ ಭಾಷೆಯಾಗಿದೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಕನ್ನಡ ಭಾಷೆಗೆ ದೇವಭಾಷೆಯ ಪ್ರಾಶಸ್ತೆಯನ್ನು ನೀಡಿದರು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ, 842ನೆಯ ಶಿವಾನುಭವ ಗೋಷ್ಠಿ ಮತ್ತು ಶರಣೆ ನೀಲಾಂಬಿಕಾ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ʼಕನ್ನಡಗಳಲ್ಲಿಯೇ ವಚನಗಳು ಬರೆಯುವ ಮೂಲಕ ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ್ದರು. ಇಂದು ನಾವು ಕನ್ನಡ ಭಾಷೆ ಉಳಿಸಿ ಬೆಳೆಸಬೇಕಾಗಿದೆ. ಕನ್ನಡ ನಮ್ಮ ಮಾತೃಭಾಷೆಯಾಗಿದೆ. ಮಾತೃಭಾಷೆಯಲ್ಲಿಯೇ ನಮಗೆ ಕನಸುಗಳನ್ನು ಬೀಳುತ್ತವೆ. ಅದನ್ನು
ನೆನೆಪು ಮಾಡಲು ಮಾತೃ ಭಾಷೆಯ ಶಿಕ್ಷಣ ಅವಶ್ಯಕವಾದದ್ದು. ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದು ರಾಜ್ಯ ರಾಷ್ಟ್ರಮಟ್ಟದ ಸಾಧನೆ ಮಾಡಬಹುದು ಎಂಬುದಕ್ಕೆ ಅನೇಕ ಉದಾಹರಣೆಗಳು ಇವೆʼ ಎಂದು ನುಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡಾ.ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ಚನ್ನಬಸವೇಶ್ವರ ಗುರುಕುಲದಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳು ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.  ಆ ದಿಸೆಯಲ್ಲಿ ನಾವು ಮನೆಯಲ್ಲಿ ಮನಸ್ಸಿನಲ್ಲಿ ಕನ್ನಡದ ಪ್ರೀತಿ ಬೆಳೆಸಬೇಕು. ಅಂದರೆ ನಮ್ಮ ಸಾಹಿತ್ಯ ಸಂಸ್ಕೃತಿ ಪರಂಪರೆ ಉಳಿದು ಬೆಳೆಯುತ್ತದೆʼ ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೀರಾಚಂದ್ ವಾಘಮಾರೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. 

ಇದೇ ವೇಳೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೀರಾಚಂದ ವಾಘಮಾರೆ, ನರಸಿಂಹಲು, ಶ್ರೀಕಾಂತ ಬಿರಾದಾರ್ ಅವರನ್ನು ಶ್ರೀಮಠದ ವತಿಯಿಂದ ಸತ್ಕರಿಸಲಾಯಿತು. ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ಅಧ್ಯಕ್ಷತೆ ವಹಿಸಿದ್ದರು. ಮಲ್ಲಮ್ಮ ಆರ್.ಪಾಟೀಲ್ ಅನುಭಾವ ನೀಡಿದರು. 

ಈ ಸುದ್ದಿ ಓದಿದ್ದೀರಾ? ಬೀದರ್‌ | ವಚನಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ : ಡಾ. ಗಂಗಾಬಿಕಾ ಪಾಟೀಲ್

ಕನ್ನಡಪರ ಸಂಘಟನೆಗಳ ಮುಖಂಡರಾದ ಜೈರಾಜ  ಕೊಳ್ಳಾ, ಸಂತೋಷ ಬಿ.ಜಿ.ಪಾಟೀಲ, ಸಂಗಮೇಶ ಗುಮ್ಮೆ, ಸಂಜುಕುಮಾರ ನಾವದಗಿ,  ಸಂತೋಷ ನಾಟೇಕರ್, ರಾಜಕುಮಾರ ಡಾವರಗಾಂವೆ, ಬಸವರಾಜ ಸಂಪಂಗೆ, ಅನೀಲ ಹಾಲಪುರ್ಗೆ, ಮಾಳಸ್ಕಾಂತ ವಾಘೆ, ಅಕ್ಷಯ ಸೋಮನಾಥ ಮುದ್ದಾ, ಚಂದ್ರಕಲಾ ಪ್ರಭು ಡಿಗ್ಗೆ, ಕೈಲಾಸ ಪಾಟೀಲ್ ಉಪಸ್ಥಿತರಿದ್ದರು. ಗುರುಪ್ರಸಾದ ಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ದೀಪಕ ಠಮಕೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...