ಕೋಲಾರ | ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರ ನೇಮಕ

Date:

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಆದೇಶಾನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ ಉಳಿವಿಗಾಗಿ ಹಾಗೂ ಬಲವರ್ಧನೆಗಾಗಿ ಸಾಕಷ್ಟು ಹೋರಾಟಗಳನ್ನು ರೂಪಿಸಿದ್ದು, ಇವರ ಹೋರಾಟಕ್ಕೆ ಸಂದ ಗೌರವ ಇದಾಗಿದೆ.

ಇನ್ನೂ ಕೋಲಾರದ ಷಹೀನ್ ಷಾ ನಗರದ ಅರ್ಬಾಜ್ ಪಾಷ ಅವರು ಸುಮಾರು 10 ವರ್ಷಗಳ ಉಪನ್ಯಾಸಕ ವೃತ್ತಿಯೊಂದಿಗೆ ಬೆಂಗಳೂರಿನ ಕಿಂಗ್ ಸ್ಟನ್ ಕಾಲೇಜಿನಲ್ಲಿ 7 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಸಿಂಡಿಕೇಟ್‌ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಮತ್ತೊಬ್ಬರು ನಗರದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಜೈದೀಪ್ ಅವರ ಶಿಕ್ಷಣ ಕ್ಷೇತ್ರದ ಸೇವೆಯನ್ನು ಗುರುತಿಸಿ ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ನೂತನ ಸಿಂಡಿಕೇಟ್ ಸದಸ್ಯರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಸ್.ಎನ್ ನಾರಾಯಣಸ್ವಾಮಿ, ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಮುಖಂಡರಿಗೆ ಧನ್ಯವಾದಗಳು. ಹಿರಿಯರ ಮಾರ್ಗದರ್ಶನದಲ್ಲಿ ಹೊಸ ವಿವಿಯನ್ನು ಮಾದರಿ ವಿಶ್ವವಿದ್ಯಾಲಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...