ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ

Date:

ಕೋಲಾರ: ಸಿಪಿಐಎಂ ಪಕ್ಷದ ತಾಲೂಕು ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ (ಕೆ.ಪಿ.ಆರ್.ಎಸ್) ಜಿಲ್ಲಾ ಅಧ್ಯಕ್ಷ ಟಿ.ಎಂ.ವೆಂಕಟೇಶ್ (54) ಶನಿವಾರ ಮಧ್ಯರಾತ್ರಿ ತಾಲ್ಲೂಕಿನ ಮುದುವಾಡಿ ಕೆರೆ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತರಾದರು.

ಸೋಮವಾರ ಕೋಲಾರ ನಗರದಲ್ಲಿ ಕೆ.ಪಿ.ಆರ್.ಎಸ್ ರಾಜ್ಯ ಸಮ್ಮೇಳನ ಆರಂಭವಾಗಲಿರುವ ಕಾರಣ ಶನಿವಾರ ಬ್ಯಾನರ್‌, ಬಂಟಿಂಗ್ಸ್‌ ಕಟ್ಟಿ ಮಧ್ಯರಾತ್ರಿ 12.45ರ ಸುಮಾರಿಗೆ ಸ್ವಗ್ರಾಮ ತುರಾಂಡಹಳ್ಳಿಗೆ ತೆರಳುವಾಗ ಅವರಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಮುದುವಾಡಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಘಾತದ ವಿಚಾರ ಗೊತ್ತಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದಾಗ ಕೆರೆಯಲ್ಲಿ ಕಾರು ಹಾಗೂ ವೆಂಕಟೇಶ್‌ ಶವ ಇರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆಯ ಬದಿಯಲ್ಲಿ ತಡೆಗೋಡೆ ಇಲ್ಲದ ಕಾರಣ ಈ ಅವಘಡ ಸಂಭವಿಸಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯಾಹ್ನ 3.30 ತನಕ ನಗರದ ಪಾಲಸಂದ್ರ ಲೇಔಟ್ ಸಂಘದ ಕಛೇರಿಯಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರು ಸಂಜೆ 6 ಗಂಟೆಗೆ ಸ್ವಗ್ರಾಮ ತುರಾಂಡಹಳ್ಳಿಯಲ್ಲಿ ವೆಂಕಟೇಶ್‌ ಅವರ ಅಂತ್ಯಕ್ರಿಯೆ ನಡೆಯಿತು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ವೆಂಕಟೇಶ್‌ ನಿಧನಕ್ಕೆ ಸಿಪಿಎಂ ಕೋಲಾರ ಜಿಲ್ಲಾ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್, ಮಾಜಿ ಜಿಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ವರಲಕ್ಷ್ಮೀ, ಕೆ.ಪಿ.ಆರ್.ಎಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಜನಪರ ಚಳುವಳಿಯ ಮುಖಂಡರು ಅಂತಿಮ ದರ್ಶನ ಪಡೆದರು.

ಮೂರು ದಿನ ರಾಜ್ಯ ಸಮ್ಮೇಳನ ಕೋಲಾರದಲ್ಲಿ ಸೋಮವಾರ ಆರಂಭವಾಗಲಿದ್ದು, ಅದರ ಹಿಂದಿನ ದಿನ ಈ ದುರ್ಘಟನೆ ನಡೆದಿರುವುದು ಎಲ್ಲರನ್ನೂ ಆಘಾತದಲ್ಲಿ ಮುಳುಗಿಸಿದೆ. ಸಮ್ಮೇಳನದ ತಯಾರಿ ಭಾಗವಾಗಿ ಅವರು ಜಿಲ್ಲೆಯ ಮುಖಂಡರ ಜೊತೆಗೂಡಿ ತಿಂಗಳಿಂದ ಸತತವಾಗಿ ಸಿದ್ಧತೆಯಲ್ಲಿ ತೊಡಗಿದ್ದರು. ವೆಂಕಟೇಶ್‌ ಅವರ ನಿಧನದಿಂದ ಜಿಲ್ಲೆಯ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ, ರೈತರು, ಕೂಲಿಕಾರರು ಹಾಗೂ ಬಡವರ ಚಳವಳಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಿಪಿಎಂ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಹೇಳಿದ್ದಾರೆ.

ವೆಂಕಟೇಶ್‌ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವ ಹಾಗೂ ಎಂತದ್ದೇ ಸಮಸ್ಯೆ ಬಂದರೂ ಅದಕ್ಕೆ ಪರಿಹಾರ ಕಂಡುಕೊಳ್ಳುವ ನಾಯಕರಾಗಿದ್ದವರು. ಎರಡು ಬಾರಿ ಎಸ್‌ಎಫ್‌ಐ ನೇತೃತ್ವದ ವಿದ್ಯಾರ್ಥಿ ಚಳವಳಿಯಲ್ಲಿ ಭಾಗವಹಿಸಿದ್ದರು. 1996ರಲ್ಲಿ ಪ್ರಾಂತ ರೈತ ಸಂಘದ ಕೋಲಾರ ತಾಲ್ಲೂಕು ಸಂಘಟನಾ ಸಮ್ಮೇಳನ ನಡೆದಾಗ ಆ ಸಮ್ಮೇಳನದಲ್ಲಿ ರೈತ ಪ್ರತಿನಿಧಿಯಾಗಿ ಭಾಗವಹಿಸಿದ್ದರು. ತಾಲ್ಲೂಕಿನ ರೈತ ಸಂಘದ ಮುಖಂಡರಾಗಿ ಆಯ್ಕೆಯಾಗಿದ್ದರು. 2008ರಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಎರಡು ಅವಧಿ ಪೂರೈಸಿದ್ದರು. 2023ರಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2026ರಲ್ಲಿ ಪುನರಾಯ್ಕೆಯಾಗಿದ್ದರು. ಜಿಲ್ಲೆಯ ರೈತ ಚಳವಳಿಯಲ್ಲಿ 20 ವರ್ಷಗಳಿಂದ ನಿರಂತರವಾಗಿ ಅರ್ಪಿಸಿಕೊಂಡು ಹಗಲು ರಾತ್ರಿ ದುಡಿದಿದ್ದರು.

ಜಿಲ್ಲೆಯ ವಿದ್ಯುತ್ ಹೋರಾಟ, ತರಕಾರಿ, ಟೊಮೊಟೊ, ಮಾವು ಬೆಲೆ ಕುಸಿದಾಗ ಹೋರಾಟ, ಶಾಶ್ವತ ನೀರಾವರಿ ಹೋರಾಟ, ಮನರೇಗಾ ಕೂಲಿಕಾರರ ವೇತನ ಸಮಸ್ಯೆ ಹೋರಾಟ, ಬಡವರಿಗೆ ಬ್ಯಾಂಕ್ ಸಾಲ ನೀಡಬೇಕೆನ್ನುವ ಹೋರಾಟ, ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್‌ ವೇ ರೈತ ವಿರೋಧಿ ಭೂಸ್ವಾಧೀನದ ವಿರುದ್ಧ ಹೋರಾಟ ರೂಪಿಸಿದ್ದರು. ರೇಷ್ಮೆ, ಕೋಳಿ ಸಾಕಣೆದಾರರನ್ನು ಸಂಘಟಿಸಿದ್ದರು. ಬಗುರ್ ಉಕುಂ ಸಾಗುವಳಿ ಸಕ್ರಮದ ಪ್ರಶ್ನೆ, ಪಿ.ನಂಬರ್‌ಗಳ ದುರಸ್ತಿ ಹಾಗೂ ಅರಣ್ಯ ಇಲಾಖೆಯವರ ರೈತರ ಮೇಲಿನ ಅಕ್ರಮಣಕಾರಿ ನೀತಿಗಳ ವಿರುದ್ಧ ಹೋರಾಟಗಳನ್ನ ಕಟ್ಟಿ ಪಾಲ್ಗೊಂಡಿದ್ದರು.

ಇದನ್ನು ಓದಿದ್ದೀರಾ..?ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಬೇಡ : ಶಾಸಕ ಕೊತ್ತೂರು ಮಂಜುನಾಥ್

2007 ರಿಂದ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಸಾಮಾನ್ಯ ಸದಸ್ಯನಾಗಿ ಪಕ್ಷದ ಸೈದ್ಧಾಂತಿಕ ವಿಚಾರಗಳಿಗೆ ಬದ್ಧರಾಗಿದ್ದರು. ಶಿಸ್ತು ಬದ್ಧವಾಗಿ ಕೆಲಸ ಮಾಡುತ್ತಾ ಕೋಲಾರ ತಾಲ್ಲೂಕಿನ ಪಕ್ಷದ ತಾಲ್ಲೂಕು ಸಮಿತಿ ಸದಸ್ಯರಾಗಿ, ತಾಲ್ಲೂಕು ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಹಳ ವೇಗವಾಗಿ ಜಿಲ್ಲಾ ಸಮಿತಿಯ ಸದಸ್ಯರಾಗಿ, ನಂತರ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಹಲವಾರು ಸಾಮೂಹಿಕ ಚಳವಳಿಯ ಜವಾಬ್ದಾರಿಗಳನ್ನು ಹೊತ್ತು ಹಗಲಿರಳು ದುಡಿಯುತ್ತಿದ್ದರು ಎಂದು ಮುಖಂಡರು ಸ್ಮರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...