ಉಡುಪಿ | ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ : ತಿಪ್ಪೇಸ್ವಾಮಿ ಕೆ. ಟಿ

Date:

ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಶಾಲೆಗೆ ಬಂದು ಮರಳಿ ಮನೆಗೆ ಹೋಗುವವರೆಗೆ ಶಿಕ್ಷಕರು ಅವರ ಕಾನೂನಾತ್ಮಕ ಪೋಷಕರಾಗಿರುತ್ತಾರೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಸುರಕ್ಷತೆಯ ಬಗ್ಗೆಯೂ ಗಮನಹರಿಸಬೇಕು. ಮಕ್ಕಳ ಸುರಕ್ಷತೆ ತುರ್ತು ಆದ್ಯತೆಯ ವಿಷಯ. ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ತರಬೇತಿ ಸಹಕಾರಿ. ಮಕ್ಕಳ ರಕ್ಷಣಾಧಿಕಾರಿಗಳಿಗೆ ಬಾಲ ನ್ಯಾಯ ಕಾನೂನಿನ ಅರಿವು ಇರಬೇಕು. ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾದ ತರಬೇತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ವಿಸ್ತರಿಸಲಾಗುವುದು. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾ ಕಾನೂನು ಅನುಷ್ಠಾನ ಉತ್ತಮವಾಗಿದೆ ಎಂದ ಅವರು ಮುಂದಿನ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ನಿಯಮಿತವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರವು ಮಕ್ಕಳ ರಕ್ಷಣಾ ನೀತಿ 2016 ಗೆ ತಿದ್ದುಪಡಿ ತಂದು 2023ರಲ್ಲಿ ಪರಿಷ್ಕರಿಸಿ ಇದನ್ನು ರಾಜ್ಯದಾದ್ಯಂತ ಅನುಷ್ಠಾನಗೊಳಿಸಿದೆ. ಈ ನೀತಿಯು ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ, ಅಪರಾಧ ತಡೆಗಟ್ಟುವುದು, ಮತ್ತು ಬಾಲ ನ್ಯಾಯ ಕಾಯ್ದೆ 2015ರ ಅಂಶಗಳನ್ನು ಒಳಗೊಂಡಿದೆ. ಈ ನೀತಿಯನ್ವಯ ರಾಜ್ಯದ 31 ಜಿಲ್ಲೆಗಳ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಆಯಾ ಶಾಲೆಯ ಒಂದು ಶಿಕ್ಷಕರು ಮತ್ತು ಎರಡು ವಿದ್ಯಾರ್ಥಿಗಳನ್ನು ಮಕ್ಕಳ ರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಸರ್ಕಾರವು ರೂಪಿಸುವ ನೀತಿಗಳು ತಳಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎನ್ನುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಸ್ಥಳೀಯವಾಗಿ ಅನುಷ್ಠಾನಗೊಳಿಸಿ ಮಕ್ಕಳ ಸುರಕ್ಷತೆಯನ್ನು ಕಾಪಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲ ವೈ.ಟಿ ರಾಘವೇಂದ್ರ ಬಾಲ ನ್ಯಾಯ ಕಾಯ್ದೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಯ ಉಪನಿರ್ದೇಶಕ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...