ಬೆಂ.ಗ್ರಾಮಾಂತರ | ಹೊಲಿಗೆ, ವಿಡಿಯೋಗ್ರಫಿ, ಜಿಮ್ ತರಬೇತಿ; ಅರ್ಜಿ ಆಹ್ವಾನ

Date:

ಬೆಂ.ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಲಿಗೆ ತರಬೇತಿ ಶಿಬಿರಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯುಳ್ಳ(ಪಾಸ್/ಫೇಲ್), 18 ರಿಂದ 40 ವಯಸ್ಸಿನ ಆಸಕ್ತರಿಗೆ ನ.28 ರಿಂದ ಡಿ.17ರವರೆಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಪಡೆದ 18 ರಿಂದ 40 ವರ್ಷ ವಯಸ್ಸಿನವರಿಗೆ ಡಿ.6 ರಿಂದ ಡಿ.17 ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ನಡೆಯಲ್ಲಿದ್ದು, ಜಿಮ್/ಫಿಟ್ನೆಸ್ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಪಡೆದ 18 ರಿಂದ 40 ವರ್ಷ ವಯಸ್ಸಿನವರಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ನಡೆಯಲಿದೆ.

ಆಸಕ್ತ ಯುವಕ/ಯುವತಿಯರು ನವೆಂಬರ್ 25ರ ಒಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ‌

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಮಹಿಳೆ ಕಿಡ್ನ್ಯಾಪ್‌ ಮಾಡಿ ಕೊಲೆಗೆ ಯತ್ನ; ಆರೋಪಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 9632778567 & 080-29787443 ಗೆ ಸಂಪರ್ಕಿಸಬಹುದಾಗಿದೆ ಎಂದು ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...