ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ತಲಪಾಡಿ ಟೋಲ್ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ರಿಕ್ಷಾ ಒಂದರಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಬೆಂಗಳೂರಿನ ಬ್ಯಾರಿ ಸೆಂಟ್ರಲ್ ಕಮಿಟಿ (R)ಯ ಅಧ್ಯಕ್ಷ ಶಬೀರ್ ಬ್ರಿಗೇಡ್ ಅವರ ನೇತೃತ್ವದಲ್ಲಿ ನಿಯೋಗವು ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರನ್ನು ಭೇಟಿ ಮಾಡಿ, ಅಪಘಾತದಲ್ಲಿ ಮೃತರಾದ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚಗಳನ್ನು ಸಂಸ್ಥೆಯು ಭರಿಸಬೇಕೆಂದು ಒತ್ತಾಯಪೂರ್ವಕ ಮನವಿ ಸಲ್ಲಿಸಿದೆ.
ಅಲ್ಲದೆ, ಅಜಾಗರೂಕ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಲಾಗಿದೆ.
ಇದನ್ನೂ ಓದಿ: ಮಂಗಳೂರು | 9 ವರ್ಷಗಳ ಬಳಿಕ ಕಲಶ ಮರುಸ್ಥಾಪನೆ





