ತಾಳಿಕೋಟೆ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ದವಿಪ ಖಂಡನೆ

Date:

ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ. ಆದರೆ, ಸರ್ಕಾರ ಜಿಲ್ಲೆಯಲ್ಲಿ ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್‌ನರ್‌ಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರದಲ್ಲಿದೆ ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟಿ ಅಧ್ಯಕ್ಷ ಗುರುಪ್ರಸಾದ್ ಬಿಜಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ ಆಗಬೇಕೆಂದು ಹಲವಾರು ವಿದ್ಯಾರ್ಥಿ ಸಂಘಟನೆಗಳು ಕಳೆದ 15 ವರ್ಷಗಳಿಂದ ಹೋರಾಟಗಳನ್ನು ನಡೆಸುತ್ತಿವೆ. ಇದರ ಫಲವಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ, ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ಮಾದರಿಯ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಹಾಗೂ ಆರೋಗ್ಯ ಸೇವಾ ವಲಯದಲ್ಲಿ ಇರಬೇಕಾಗಿತ್ತು. ಆದರೆ ಖಾಸಗೀಕರಣದ ಮೂಲಕ ಎರಡು ಕ್ಷೇತ್ರಗಳನ್ನು ಮಾರಾಟಮಾಡುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು, ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ತೊರೆದಿದ್ದಾರೆ. ಶಿಕ್ಷಣ ಎಂಬುದು ಕೆಲವೇ ಜನರ ಸ್ವತ್ತಾಗದೆ ಎಲ್ಲರ ಸ್ವತ್ತಾಗಬೇಕು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗಬೇಕಾದರೆ ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಆಗ ಮಾತ್ರ ಬಡವರ, ಕಾರ್ಮಿಕರ, ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ. ಆದ್ದರಿಂದ ಸರ್ಕಾರ ಪಿಪಿಪಿ ಹೆಸರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸದೇ ಸರ್ಕಾರಿ ಕಾಲೇಜು ಸ್ಥಾಪಿಸಬೇಕು. ಶಿಕ್ಷಣವನ್ನು ರಾಜಕಾರಣಿಗಳು, ಉದ್ಯಮಿಗಳು ಅಪಹರಿಸುವುದನ್ನು ದಲಿತ ವಿದ್ಯಾರ್ಥಿ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...