ಮದ್ದೂರು | ಸೆ.13, 14ರಂದು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ

Date:

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಡ್ಯ ಜಿಲ್ಲೆ ಹಾಗೂ ಚಂದೂಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ 2024ರ ಸೆಪ್ಟೆಂಬರ್ 13 ಮತ್ತು 14 ರಂದು 2024 – 25 ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಸೆಪ್ಟೆಂಬರ್ 13ರ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕ್ರೀಡಾಕೂಟವನ್ನು ಉದ್ಘಾಟಿಸುವರು. ಸಮಾರಂಭದಲ್ಲಿ ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ತಿನ ಸದಸ್ಯರು ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಮಂಡ್ಯ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚಲುವಯ್ಯ, ಮದ್ದೂರು ತಾಲ್ಲೂಕಿನ ತಹಶೀಲ್ದಾರ್ ಜಿ.ಎಂ.ಸೋಮಶೇಖರ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಭಾಗವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಮದ್ದೂರು ವಿಧಾನಸಭಾ ಕ್ಷೇತ್ರದ ಸದಸ್ಯ ಕೆ.ಎಂ ಉದಯ್ ವಹಿಸುವರು.

ಸೆಪ್ಟೆಂಬರ್ 14 ರಂದು ಸಂಜೆ 3 ಗಂಟೆಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ಎಚ್. ನಿಂಗೇಗೌಡ ಸಮಾರೋಪ ಭಾಷಣವನ್ನು ಮಾಡಲಿದ್ದು, ಚಂದೂಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ. ಹನುಮಂತು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ನೋಡಲ್ ಅಧಿಕಾರಿಯಾದ ಎ.ಸಿ. ಗೀತಾ, ಮಂಡ್ಯ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳು ಉಪನ್ಯಾಸಕ ಸಂಘದ ಅಧ್ಯಕ್ಷರು ಚನ್ನಕೃಷ್ಣ, ಮದ್ದೂರು ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು ಎನ್. ಮಹಾದೇವ, ಎಂಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರು ಕೆ. ಸಿ. ಜೋಗಿಗೌಡ, ಎಸ್.ಐ. ಹೊನ್ನಲಗೆರೆಯ ಶಿವಲಿಂಗ ಶಿವಾಚಾರ್ಯ ಸ್ವಾಮಿ ಹಾಗೂ ಎಸ್.ಐ. ಹೊನ್ನಲಗೆರೆ ಗ್ರಾಮ ಪಂಚಾಯತಿಯ ಪದಾಧಿಕಾರಿಗಳು ಭಾಗವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಮದ್ದೂರು ತಾಲ್ಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವರು. ಈ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳ ಸಮಾಗಮ, ಕ್ರೀಡಾಜ್ಯೋತಿ ಸ್ವೀಕಾರ, ಧ್ವಜಾರೋಹಣ ಹಾಗೂ ಧ್ವಜವಂದನೆ ಸ್ವೀಕಾರ, ವಿದ್ಯಾರ್ಥಿಗಳಿಂದ ಪಥ ಸಂಚಲನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ ಎಂದು ಕ್ರೀಡಾಕೂಟದ ಆಯೋಜಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...