ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Date:

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಬುಧವಾರ ಭಾಗವಹಿಸಿದ ಅವರು ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಘೋಷಿಸಿದರು.

ಅರಣ್ಯ ಇಲಾಖೆಯವರು ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮವನ್ನು ಖಂಡಿಸಿ ಮಾತನಾಡಿದ ಚಂದ್ರು, “ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಅಲ್ಲಿನ ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಅನೇಕ ದಶಕಗಳಿಂದ ಅರಣ್ಯ ಇಲಾಖೆಯ ಜಮೀನುಗಳಲ್ಲಿ ಕೃಷಿ ಕಾರ್ಯವನ್ನು ಮಾಡುತ್ತಿರುವ ಸಣ್ಣ ಸಣ್ಣ ಹಿಡುವಳಿದಾರರಿಗೆ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲವೆಂದು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಈ ರೀತಿ ಆದೇಶವನ್ನು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಯಾಕೆ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ತರೀಕೆರೆ1

“ಈ ಬಗ್ಗೆ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಬಳಿ ಮಾತನಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯೂ ಸಹ ಮಾತನಾಡಿ ತಮ್ಮ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ನಾನು ಮುಂದಾಗುತ್ತೇನೆ” ಎಂದು ಸೇರಿದ್ದ ಸಾವಿರಾರು ರೈತರಿಗೆ ಮುಖ್ಯಮಂತ್ರಿ ಚಂದ್ರು ಆಶ್ವಾಸನೆ ನೀಡಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಒಂದು ವರ್ಷದಲ್ಲಿ 90 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ನಾಗಲಕ್ಷ್ಮೀ ಚೌಧರಿ

ಪ್ರತಿಭಟನೆಯಲ್ಲಿ ಜಿಲ್ಲೆಯ ನಾನಾ ರೈತ ಸಂಘಟನೆಗಳು ಹಾಗೂ ಆಮ್ ಆದ್ಮಿಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿ ಚಂದ್ರು 3
ತರೀಕೆರೆ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...