ಅಪ್ರಾಪ್ತ ಬಾಲಕಿಯರ ವಿಡಿಯೋ, ಫೋಟೋ ಕ್ಲಿಕ್ಕಿಸಿದ್ದ ಶಿಕ್ಷಕ; ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

ಅಪ್ರಾಪ್ತ ಬಾಲಕಿಯರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ವಿರುದ್ಧ ಪೋಕ್ಸೋ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದ್ದು, ಪ್ರಕರಣವನ್ನು ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ.

ಶಿಕ್ಷಕ ಮುನಿಯಪ್ಪ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರು ಬಟ್ಟೆ ಬದಲಿಸುವಾಗ ಅವರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ್ದ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಆರೋಪಿ ಮುನಿಯಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆತನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ವರದಿ ಓದಿದ್ದೀರಾ?: ಮಹಿಳೆಯರ ಮೇಲಿನ ನಿಲ್ಲದ ಶೋಷಣೆ; ಶಿಕ್ಷಣ ಒಂದೇ ಪರಿಹಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ”ಆಘಾತಕಾರಿ ಸಂಗತಿಯೆಂದರೆ ಆರೋಪಿಯ ಬಳಿ ವಿವಿಧ ಬ್ರಾಂಡ್‌ಗಳ ಐದು ಮೊಬೈಲ್ ಫೋನ್‌ಗಳಿವೆ. ಎಲ್ಲ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಪ್ರತಿ ಮೊಬೈಲ್ ಫೋನ್‌ನಲ್ಲಿ ಸುಮಾರು 1,000 ಚಿತ್ರಗಳನ್ನು ಮತ್ತು ನೂರಾರು ವೀಡಿಯೊಗಳಿವೆ. ಶಿಕ್ಷಕನಾಗಿರುವ ಆರೋಪಿಯ ಬಳಿ ಐದು ಮೊಬೈಲ್‌ಗಳು ಏಕೆ ಇವೆ? ಅವುಗಳಲ್ಲಿನ ವಿಡಿಯೋಗಳು ಮತ್ತು ಚಿತ್ರಗಳು ಯಾವುವು ಎಂಬುದು ತನಿಖೆಯ ವಿಷಯವಾಗಿದೆ. ವಿಡಿಯೋ ಮತ್ತು ಚಿತ್ರಗಳ ಮಾಹಿತಿಯು ಸಂಪೂರ್ಣ ತನಿಖೆಯಿಂದ ಮಾತ್ರವೇ ಹೊರಬರಲು ಸಾಧ್ಯ” ಎಂದು ಹೇಳಿದೆ.

“ದೂರು, ತನಿಖೆಯ ವೇಳೆ ದಾಖಲಾದ ಆರೋಪಿಯ ಹೇಳಿಕೆಗಳು ಮತ್ತು ಎಫ್‌ಎಸ್‌ಎಲ್ ವರದಿಗಳನ್ನು ಗಮನಿಸಿದರೆ, ಆತನ ಕೃತ್ಯವು ಭಯಾನಕವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...