ಉಡುಪಿ | ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು: ಪ್ರೊ. ರಾಮ್ ರಾಮಸ್ವಾಮಿ

Date:

ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಹೀನವಾದರೆ ಗ್ರಾಮೀಣ ಭಾರತದ ವಿದ್ಯಾರ್ಥಿಗಳು, ಕೆಳಸ್ತರದ ಜನರು, ಮಹಿಳೆಯರು ಉನ್ನತ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು ಎಂದು ಹೈದರಾಬಾದ್‌ ಕೇಂದ್ರೀಯ ವಿವಿ ವಿಶ್ರಾಂತ ಉಪಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಶೈಕ್ಷಣಿಕ ಬಿಕ್ಕಟ್ಟುಗಳೊಡನೆ ವರ್ತಮಾನದ ಮುಖಾಮುಖಿ ಟೀಚರ್ ಶೈಕ್ಷಣಿಕ ಹಬ್ಬದಲ್ಲಿ ಮಾತನಾಡಿದರು.

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುವ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕು. ಆದರೆ ಆರ್ಥಿಕ ಬೆಂಬಲ, ವ್ಯವಸ್ಥಿತ ಮೂಲಸೌಕರ್ಯಗಳಿಲ್ಲದ ಪರಿಣಾಮ ದೇಶದ ಸಾರ್ವಜನಿಕ ವಿವಿ ಮತ್ತು ಶಿಕ್ಷಣ ಸಂಸ್ಥೆಗಳು ಬಲಹೀನವಾಗುತ್ತಿರುವುದು ಖೇಧಕರ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ತಜ್ಞ ಪ್ರೊ. ಮಹಾಬಲೇಶ್ವರ ರಾವ್ ಮಾತನಾಡಿ, “ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರೀಕ್ಷಾ ಕೇಂದ್ರಿತ, ಅಂಕ ಪ್ರಧಾನ ಶಿಕ್ಷಣ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಕಡಿಮೆಯಾಗುತ್ತಿದೆ. ಕೇಂದ್ರದ ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿದ ಇಂದಿನ ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಮಿತಿ ರಚಿಸಿದ್ದು‌, ಕೇಂದ್ರ ಮತ್ತು ರಾಜ್ಯದ ನಡುವೆ ಸಂಘರ್ಷ ಆರಂಭವಾಗುತ್ತದೆ. ರಾಜಕೀಯ ವೈಮನಸ್ಸು, ಪೈಪೋಟಿಯಿಂದಾಗಿ ಪೋಷಕರು, ಶಿಕ್ಷಕರು, ಪಠ್ಯ ಕಲಿಯುವ ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕನ್ನಡ ರಾಜ್ಯೋತ್ಸವದ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಕರ್ನಾಟಕ ಭಾರತ ಜ್ಞಾನ ವಿಜ್ಞಾನ ಸಮಿತಿ ಕೋಶಾಕಾರಿ, ಥಿಯರಿಟಿಕಲ್ ಕಂಪ್ಯೂಟರ್ ಸೈಂಟಿಸ್ಟ್ ನಿವೃತ್ತ ಪ್ರಾಧ್ಯಾಪಕ ಪ್ರೊ. ಕಮಲ್ ಲೋದಯ ಅಧ್ಯಕ್ಷತೆ ವಹಿಸಿದ್ದರು. ಪ್ರಿನ್ಸಿಪಾಲ್ ಅಭಿಲಾಷಾ ಹಂದೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಟಿ ಎ ಪ್ರಶಾಂತ್ ಬಾಬು, ಉದಯ ಗಾಂಷ್ಕರ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...