ಒಂದೇ ಕ್ಲಿಕ್, ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಪ್ರಾಧ್ಯಾಪಕ!

Date:

ಒಂದೇ ಕ್ಲಿಕ್‌ನಲ್ಲಿ ಬ್ಯಾಂಕ್‌ ಖಾತೆಯಲ್ಲಿದ್ದ ಪ್ರಾಧ್ಯಾಪಕರೊಬ್ಬರು ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಮಿಷಗಳಿಗೆ ಒಳಗಾಗಿ ಹಣ ಕಳೆದುಕೊಳ್ಳುವವರ ಸಂಖ್ಯೆ ಅಧಿಕವಾಗುತ್ತಿದೆ. ಅದರಲ್ಲೂ ವಿದ್ಯಾವಂತರೇ ಹೆಚ್ಚಾಗಿ ಇಂತಹ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಪ್ರಾಧ್ಯಾಪಕರು ಕೂಡಾ ಹೆಚ್ಚು ಲಾಭ ಗಳಿಸುವ ಆಸೆಯಲ್ಲಿ ತಮ್ಮ ಉಳಿತಾಯವನ್ನು ಕಳೆದುಕೊಂಡಿದ್ದಾರೆ.

ಖಾಸಗಿ ಬ್ಯಾಂಕ್‌ ಒಂದರ ಆನ್‌ಲೈನ್ ಸೇವೆಯ ಲಿಂಕ್ ಹೆಸರಿನಲ್ಲಿ ಅಪರಿಚಿತ ವಾಟ್ಸಾಪ್ ಸಂಖ್ಯೆಯಿಂದ ಸಂದೇಶವೊಂದು ಬಂದಿದ್ದು ರಾಮನಗರದ ಪ್ರಾಧ್ಯಾಪಕರೊಬ್ಬರು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ಅತ್ಯಾಚಾರ, ವಂಚನೆ: ಶಿವಮೊಗ್ಗದ ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು

ಈ ಲಿಂಕ್ ಕ್ಲಿಕ್ ಮಾಡುತ್ತಿದ್ದಂತೆ ಬ್ಲಾಕ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಶೇಕಡ 5-6ರಷ್ಟು ಲಾಭ ಪಡೆಯಲು ಸಾಧ್ಯವಿದೆ ಎಂಬ ಸಂದೇಶ ಕಾಣಿಸಿಕೊಂಡಿದೆ. ಪ್ರಾಧ್ಯಾಪಕರು ಲಾಭ ಸಿಗುವ ನಿರೀಕ್ಷೆಯಲ್ಲಿ ಅರ್ಜಿ ಭರ್ತಿ ಮಾಡಿ ಅದರಲ್ಲಿ ತಮ್ಮ ಬ್ಯಾಂಕ್ ಖಾತೆ ವಿವರವನ್ನೂ ಸೇರಿಸಿದ್ದಾರೆ.

ಅದಾದ ಬಳಿಕ ವಂಚಕರು ಅಧಿಕ ಹೂಡಿಕೆ ಮಾಡಿದರೆ ಅಧಿಕ ಲಾಭ ಬರುತ್ತದೆ ಎಂದು ಹೇಳಿದ್ದು, ಪ್ರಾಧ್ಯಾಪಕರು ವಿವಿಧ ಬ್ಯಾಂಕ್ ಖಾತೆಗೆ ಜುಲೈ 4ರಿಂದ ಆಗಸ್ಟ್ 6ರವರೆಗೆ ಬರೋಬ್ಬರಿ 12,69,101 ರೂಪಾಯಿ ಹಣವನ್ನು ತಮ್ಮ ಬ್ಯಾಂಕ್ ಖಾತೆಯಿಂದ ಆನ್‌ಲೈನ್‌ ಮೂಲಕ ವರ್ಗಾಯಿಸಿದ್ದಾರೆ.

ಅದಾದ ಬಳಿಕ ಅಸಲು ಬಡ್ಡಿ ಎರಡೂ ಬರದಿದ್ದಾಗ ತಾನು ಮೋಸ ಹೋಗಿರುವುದು ಅರಿತ ಪ್ರಾಧ್ಯಾಪಕರು ರಾಮನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...