ಶಿಕ್ಷಕರು, ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿದ್ದು, ನಮ್ಮನ್ನು ಬೆಂಬಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

Date:

  • ‘ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ’
  • ‘ಯುವನಿಧಿ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆ ರೂಪಿಸುತ್ತಿದ್ದೇವೆ’

ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದರು.

“ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ ಕೊಡುವ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಿ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? 9 ಮತ್ತು 10ನೇ ತರಗತಿಗೆ ಮೊಟ್ಟೆ ವಿಸ್ತರಣೆ; ಸಿದ್ದರಾಮಯ್ಯರನ್ನು ಅಭಿನಂದಿಸಿ ಪತ್ರ ಬರೆದ ವಿದ್ಯಾರ್ಥಿನಿ

ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲಾ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಚಿವ ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...