ಕೋಲಾರ | ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ : ನಸೀರ್ ಅಹಮದ್

Date:

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಲಹೆ ನೀಡಿದರು.

ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಓದಲು ಪೂರಕವಾದ ವಾತಾವರಣ ಇರಲಿಲ್ಲ. ಪ್ರಸ್ತುತ ಕಣ್ಣು ಮುಂದೆ ತಂತ್ರಜ್ಞಾನವನ್ನು ನೋಡಬಹುದಾದ ಸಂದರ್ಭದಲ್ಲಿ ನಾವು ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ ನಡೆಯುವ ವಿಚಾರಗಳನ್ನು ನೋಡಬಹುದು. ಮೊದಲು ಅಲ್ಲಿಗೆ ಹೋಗಬೇಕಾಗಿತ್ತು. ಇವತ್ತು ಇಲ್ಲೇ ಅಂತಹ ಅವಕಾಶಗಳು ಇವೆ. ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸ್ ಗಳ ಜೊತೆಗೆ ಸೌಲಭ್ಯಗಳನ್ನು ಕೊಡುವ ಕೆಲಸ ನಡೆಯುತ್ತಿದೆ ಎಂದರು.

ಹಿಂದೆ ಕೋಲಾರ ಜಿಲ್ಲೆ ಎಂದರೆ ಸಿವಿಲ್ ಸರ್ವಿಸ್ ಹುದ್ದೆಗಳ ತವರು ಮನೆಯಾಗಿತ್ತು. ಎಲ್ಲಾ ಇಲಾಖೆಗಳಲ್ಲಿ ಜಿಲ್ಲೆಯ ಅಧಿಕಾರಿ ವರ್ಗ ಇತ್ತು. ಅಂತಹ ಸಂದರ್ಭ ಮತ್ತೆ ಬರಬೇಕಾದರೆ ನೀವು ಎಲ್ಲರೂ ಶಿಸ್ತುನಿಂದ ಕಲಿಯಬೇಕು. ಸಾಧನೆ ಮಾಡುವವರು ನಿಮ್ಮಲ್ಲಿ ಸಹ ಇದ್ದಾರೆ. ಆದರೆ ಸಾಧಿಸುವ ಛಲ ಬರಬೇಕಾಗಿದೆ. ಕಾಲೇಜುಗಳಲ್ಲಿ ಹೆಚ್ಚಾಗಿ ಕೌಶಲ್ಯಕ್ಕೆ ಸಂಬಂಧಿಸಿದ ತರಬೇತಿ ಕೋರ್ಸುಗಳನ್ನು ತೆರೆದು ಓದಿನ ನಂತರ ನೇರವಾಗಿ ಉದ್ಯೋಗ ಸಿಗುವಂತಾಗಬೇಕು ಎಂದು ನಸೀರ್ ಅಹಮದ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವಿಧ್ಯಾರ್ಥಿಗಳೇ ದೇಶದ ಆಸ್ತಿಯಾಗಿದ್ದಾರೆm ಗುರುಗಳ ಮಾರ್ಗದರ್ಶನದಲ್ಲಿ ನೀವು ಎಲ್ಲರ ಒಳ್ಳೆಯ ಹೆಸರು ಗಳಿಸಬೇಕು. ಸಾಧನೆ ಎಲ್ಲರೂ ಮಾಡಬಹುದು. ಅದಕ್ಕೆ ಪರಿಶ್ರಮ ಮುಖ್ಯ. ಸಾಧನೆ ಮಾಡಿದಾಗ ನಿಮ್ಮ ತಂದೆ ತಾಯಿಯ ಜೊತೆಗೆ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರು ಸಹ ದೇಶದ ಪ್ರಥಮ ಪ್ರಜೆಯಾಗಬಹುದು ಎಂಬುದನ್ನು ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿದ್ದಾರೆ. ಅವರ ನಡುವಳಿಕೆ, ವ್ಯಕ್ತಿತ್ವ ಮತ್ತು ಸಾಧನೆ ನಮಗೆ ಸ್ಪೂರ್ತಿಯಾಗಬೇಕು. ಸಾಧನೆ ಮಾಡಿದ ಮಹನೀಯರ ದಾರಿಯಲ್ಲಿ ನಡೆದಾಗ ನಮಗೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲೂ ಲೈಂಗಿಕ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಗಳು ಇರಲಿ

ಕಾರ್ಯಕ್ರಮದಲ್ಲಿ ಮಹಿಳಾ ಸಮಾಜ ಆಡಳಿತಾಧಿಕಾರಿ ಎಂ.ನವೀನಾ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ರಾಕೇಶ್, ಅಂಬರೀಷ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜೈದೀಪ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಗಂಗಣ್ಣ, ಕುರಿಗಳ ರಮೇಶ್ ಅಬ್ದುಲ್ ಖಯ್ಯೂಂ, ಮಹಿಳಾ ಸಮಾಜ ಕಾಲೇಜಿನ ಕಾರ್ಯದರ್ಶಿ ಎಂ.ನಂದನಾ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಖಜಾಂಚಿ ಪದ್ಮ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...