ಆಪರೇಷನ್‌ ಹಸ್ತ ಚರ್ಚೆ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ತೇಜಸ್ವಿನಿ ಅನಂತಕುಮಾರ್‌

Date:

  • ತೇಜಸ್ವಿನಿ ಅನಂತಕುಮಾರ್‌ ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರಲಿದ್ದಾರಾ?
  • ‘ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯದ ವಿಚಾರಗಳನ್ನು ಚರ್ಚಿಸಿದ್ದಾರೆ’

ರಾಜ್ಯದಲ್ಲಿ ಆಪರೇಷನ್‌ ಹಸ್ತ ಚರ್ಚೆ ಗರಿಗೆದರಿದ ನಡುವೆ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರು ಸೋಮವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ತೇಜಸ್ವಿನಿ ಅನಂತಕುಮಾರ್‌ ಅವರು ಡಿಕೆ ಶಿವಕುಮಾರ್‌ ಅವರನ್ನು ಸೋಮವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿದ್ದಾರೆ. ಈ ಮೂಲಕ ತೇಜಸ್ವಿನಿ ಅನಂತಕುಮಾರ್‌ ಅವರು ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರಲಿದ್ದಾರಾ ಎಂಬ ಚರ್ಚೆ ಕೂಡ ಮುನ್ನೆಲೆಗೆ ಬಂದಿದೆ.

ಈ ಮಾತಿಗೆ ಮತ್ತಷ್ಟು ಪುಷ್ಟಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ “ತೇಜಸ್ವಿನಿ ಅನಂತಕುಮಾರ್‌ ಅವರು ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದಾರೆ” ಎಂದು ಹೇಳಿರುವುದು ರಾಜಕೀಯ ಆಸಕ್ತರ ಕಣ್ಣು ಅರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

2019ರ ಲೋಕಸಭಾ ಚುನಾವಣೆ ವೇಳೆ ತಮ್ಮ ಪತಿ ಅನಂತಕುಮಾರ್‌ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಕೊನೆ ಕ್ಷಣದಲ್ಲಿ ಅವರ ಬದಲು ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ತೇಜಸ್ವಿನಿ ಅನಂತಕುಮಾರ್‌ ಅಸಮಾಧಾನಗೊಂಡಿದ್ದರು.

ಇದಾದ ಬಳಿಕ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಬಸವನಗುಡಿ ಮತ್ತು ಜಯನಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆಗಲೂ ಬಿಜೆಪಿ ನಾಯಕರು ಅವರಿಗೆ ಮಣೆ ಹಾಕಲಿಲ್ಲ. ಆಗಲೂ ಕೂಡ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ತೇಜಸ್ವಿನಿ ಅನಂತಕುಮಾರ್‌ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...