ಹಾವೇರಿ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 13 ಮಂದಿ ದುರ್ಮರಣ

Date:

ಹೆದ್ದಾರಿಯಲ್ಲಿ ರಸ್ತೆ ಅಂಚಿನಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, 13 ಮಂದಿ ಮೃತಪಟ್ಟಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ನಡೆದಿದೆ.

ಗುಂಡೇನಹಳ್ಳಿ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ಸಕರು ಸಾಗಿಸುವ ಲಾರಿ ನಿಂತಿತ್ತು. ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಢಿಕ್ಕಿಯಾಗಿದೆ. ಘಟನೆಯಲ್ಲಿ ಟಿಟಿಯಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಪರಶುರಾಮ್ ​​(45), ನಾಗೇಶ (50), ಚಾಲಕ ಆದರ್ಶ್ (23), ಭಾಗ್ಯ (40), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ (45),  ಮಾನಸ (24), ರೂಪಾ (40) ಹಾಗೂ ಮಂಜುಳಾ (50) ಎಂದು ಗುರುತಿಸಲಾಗಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ವಾಹನಕ್ಕೆ ಪೂಜೆ ಮಾಡಿಸಲು ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಾಲಯಕ್ಕೆ ತೆರಳಿದ್ದರು. ಬಳಿಕ, ಹಲವಾರು ದೇವಾಲಯಗಳಿಗೆ ಭೇಟಿ ನೀಡಿ, ಬೆಳಗಾವಿ ಜಿಲ್ಲೆ ಸವದತ್ತಿಗೆ ತೆರಳಿ, ಅಲ್ಲಿಂದ ತಮ್ಮೂರಿಗೆ ಮರಳುತ್ತಿದ್ದರು. ಈ ವೇಳೆ, ದುರ್ಘಟನೆ ನಡೆಸಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...