ಚಿಂತಾಮಣಿ | ಬಸ್ಸು, ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಸಾವು

Date:

ಶನಿವಾರ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಅಪಘಾತ | ಗಾಯಾಳುಗಳು ಆಸ್ಪತ್ರೆಗೆ ದಾಖಲು

ಶನಿವಾರವಷ್ಟೇ ಕಾರು ಬೈಕ್‌ ನಡುವೆ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಮತ್ತೊಂದು ಅಪಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿಂತಾಮಣಿ-ಮದನಪಲ್ಲಿ ಹೆದ್ದಾರಿಯ ದಂಡುಪಾಳ್ಯದ ಬಳಿ ನಡೆದಿದೆ.

ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆ ಸಮಯದಲ್ಲಿ ಕಾರು ಮತ್ತು ಶ್ರೀ ವೆಂಕಟೇಶ್ವರ ಖಾಸಗಿ ಬಸ್ ನಡುವೆ ಭೀಕರ ಅಫಘಾತ ಸಂಭವಿಸಿದ್ದು, ಆಂಧ್ರ ಮೂಲದ ಕಾರು ಚಾಲಕ ಪ್ರವೀಣ್‌ ಚಂದ್ರ ನಾಯ್ದು(44) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಸ್‌ ಅಪಘಾತ 1

ಕಾರಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿಕೊಂಡು ಬಂದಿದ್ದು, ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಪರಿಣಾಮ ಬಸ್ಸಿನ ಮುಂಭಾಗದ ಚಕ್ರ ಮತ್ತು ಗಾಜುಗಳು ಪುಡಿಪುಡಿಯಾಗಿವೆ. ಕಾರಿನ ಮುಂಭಾಗದ ಬಾನೆಟ್ ಹಾರಿ ಹೋಗಿದ್ದು, ಕಾರಿನ ಇಂಜಿನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರು ಚಾಲಕನ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಮೃತದೇಹವನ್ನು ಜೆಸಿಬಿ ಮೂಲಕ ಹೊರತೆಗೆದು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಕಾರಿನ ಚಾಲಕ ಬೆಂಗಳೂರಿನ ಎ.ಎನ್.ಝಡ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಬೆಂಗಳೂರಿನಿಂದ ಚಿಂತಾಮಣಿ ಮಾರ್ಗವಾಗಿ ಸ್ವಗ್ರಾಮವಾದ ರಂಗಪ್ಪಗಾರಿಪಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಖಾಸಗಿ ಬಸ್ ಆಂದ್ರಪ್ರದೇಶದ ಮದನಪಲ್ಲಿಯಿಂದ ಚಿಂತಾಮಣಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತಿತ್ತು ಎಂದು ತಿಳಿದುಬಂದಿದೆ.

ಖಾಸಗಿ ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಂತಾಮಣಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇದನ್ನೂ ಓದಿ : ಬಾಗೇಪಲ್ಲಿ | ಮಕ್ಕಳ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕಲಿಸಿ : ಮಂಗಳನಾಥ ಸ್ವಾಮೀಜಿ ಕಿವಿಮಾತು

ಚಿಂತಾಮಣಿ ಉಪವಿಭಾಗದ ಡಿವೈಎಸ್‌ಪಿ ಪಿ.ಮುರಳೀಧರ, ಕೆಂಚರ‍್ಲಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ವೆಂಕಟರಾಮಪ್ಪ, ಕೆಂಚಾರ‍್ಲಹಳ್ಳಿ ಪಿಎಸ್‌ಐ ಶಿವಕುಮಾರ್, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನಾಗೇಂದ್ರ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...