ಬೀದರ್‌ | ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

Date:

ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ವೇಗವಾಗಿ ಬಂದು ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ಸುಂದರವಾಡಿ ಗ್ರಾಮದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಆಟೋ ಚಾಲಕನ ಪತ್ನಿ ಪ್ರಮೀಳಾ (32), ಆಟೋ ಚಾಲಕ ಸುನೀಲ ಜಗದಾಳೆ (35), ಚಾಲಕನ ತಾಯಿ ಅನುಷಾಬಾಯಿ ಜಗದಾಳೆ(65) ಹಾಗೂ ಅದೇ ಗ್ರಾಮದ ಪೂಜಾ ಜಾಧವ (35) ಎಂಬ ಮೃತ ದುರ್ದೈವಿಗಳಾಗಿದ್ದಾರೆ. ಗೀತಾ ಶಿವರಾಮ ಜಗದಾಳೆ ಎನ್ನುವ ಮಹಿಳೆಗೆ ಗಂಭೀರವಾಗಿ ಗಾಯಗಳಾಗಿದ್ದು, ಇವರನ್ನು ಲಾತೂರ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಆಟೋದಲ್ಲಿ ಒಟ್ಟು 8 ಜನ ಪ್ರಯಾಣಿಸುತಿದ್ದರು ಎಂದು ತಿಳಿದು ಬಂದಿದೆ.

ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಹತ್ತಿರದ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡ ದೇವರ ದರ್ಶನಕ್ಕೆಂದು ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ವಾಪಸ್‌ ಊರಿಗೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಬಸವಕಲ್ಯಾಣದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...