ಕೊಪ್ಪಳ | ದೇವರ ದರ್ಶನ ಮುಗಿಸಿ ವಾಪಸ್‌ ಬರುವಾಗ ಭೀಕರ ಅಪಘಾತ; ನಾಲ್ವರು ಸಾವು

Date:

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಖಾಸಗಿ ಬಸ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೃತರು ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60), ದುರುಗಮ್ಮ ಹನುಮಪ್ಪ (65) ಎಂದು ಗುರುತಿಸಲಾಗಿದೆ.

ಕರಮುಡಿ ಗ್ರಾಮದ ಶಿವಪ್ಪ ಹೊಸಮನಿ ಎಂಬುವರು ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ 30ಕ್ಕೂ ಹೆಚ್ಚು ಜನ ಸಂಬಂಧಿಕರನ್ನು ಟ್ರ್ಯಾಕ್ಟರ್‌ನಲ್ಲಿ ಕರೆದುಕೊಂಡು ಹೋಗಿದ್ದರು. ಹರಕೆ ತೀರಿಸಿ ಶುಕ್ರವಾರ ರಾತ್ರಿ ವಾಪಾಸ್‌ ಊರಿಗೆ ಬರುವಾಗ ಹಿಂದಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಜರುಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 18 ಜನರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ದುರುಗಮ್ಮ (65) ಎಂಬುವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...