ಮೈಕೊರೆಯುವ ಚಳಿಯಲ್ಲಿ ʼಬೀದರ್‌ ಮ್ಯಾರಾಥಾನ್‌ʼ ಸೊಬಗು; ನಟ ಸೋನು ಸೂದ್‌ ಚಾಲನೆ

Date:

ಬೀದರ್‌ ನಗರದ ಗುರುನಾನಕ್‌ ಪಬ್ಲಿಕ್‌ ಸ್ಕೂಲ್‌ ಸ್ಥಾಪನೆಯ ಸುವರ್ಣ ಮಹೋತ್ಸವ ಅಂಗವಾಗಿ ಭಾನುವಾರ ಬೆಳಗಿನ ಜಾವ ಆಯೋಜಿಸಿದ ʼಬೀದರ್‌ ಮ್ಯಾರಾಥಾನ್‌ʼಗೆ ಖ್ಯಾತ ನಟ, ನಿರ್ಮಾಪಕ ಸೋನು ಸೂದ್‌ ಚಾಲನೆ ನೀಡಿದರು.

ನಟ ಸೋನು ಸೂದ್ ಮಾತನಾಡಿ, ʼವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು, ಯಾರೂ ಕೂಡ ಅಧ್ಯಯನ ಸಮಯ ವ್ಯರ್ಥಮಾಡಿಕೊಳ್ಳಬಾರದು. ಆನ್‌ಲೈನ್ ಗೇಮ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಸಾಧನೆಯ ಗುರಿಯೆಡೆಗೆ ಸಾಗಬೇಕು. ಕನಸಿನ ಬೆನ್ನತ್ತಿ ಸಾಕಾರಗೊಳಿಸಲು ಶ್ರಮಿಸಬೇಕುʼ ಎಂದರು.

ʼಸಾಧನೆ ಮಾಡಬೇಕು ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಂಡರೆ ಆ ಕೆಲಸ ಇಂದಿನಿಂದಲೇ ಪ್ರಾರಂಭಿಸಬೇಕು. ನಾಳೆಗಾಗಿ ಕಾಯಬಾರದು. ತನಗಾಗಿ ಎಲ್ಲರೂ ಬದುಕುತ್ತಾರೆ. ಆದರೆ ಸಮಾಜಕ್ಕಾಗಿ, ದೇಶಕ್ಕಾಗಿ ಬದುಕುವವರ ಸಂಖ್ಯೆ ವಿರಳವಾಗಿದೆ. ದೇಶಕ್ಕೆ ಏನಾದರೂ ಕೊಡುಗೆ ನೀಡಿ ಹೆಸರು ಉಳಿಸಿಕೊಳ್ಳಬೇಕು. ಪುಸ್ತಕ ಮುಚ್ಚುವ ವ್ಯಕ್ತಿಗಳಾಗದೆ ಪುಟಗಳನ್ನು ತೆರೆದು ಓದುವ ಆದರ್ಶ ಸಾಧಕರಾಗಬೇಕುʼ ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೋವಿಡ್ ಸಂದರ್ಭದಲ್ಲಿ ನಾವು ಮಾಡಿದ ಕಾರ್ಯ ಜನಮೆಚ್ಚುಗೆಗೆ ಕಾರಣವಾಗಿದೆ. ಗುರುನಾನಕ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಲಬೀರಸಿಂಗ್ ಹಾಗೂ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರು ಆದೇಶ ಮಾಡಿದರೆ ನನ್ನ ಜನಸೇವೆ ಬೀದರ ಜಿಲ್ಲೆಗೂ ವಿಸ್ತರಿಸುವೆʼ ಎಂದರು.

ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ರೇಷ್ಮಾ ಕೌರ್ ಮಾತನಾಡಿ,ʼಬೀದರ ಮ್ಯಾರಥಾನ್ ನಲ್ಲಿ 6 ಸಾವಿರ ಜನರು ನೋಂದಣಿ ಮಾಡಿಸಿಕೊಂಡಿದ್ದರು. ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದಕ್ಕೆ ಎಲ್ಲರಿಗೂ ಕೃತಜ್ಞತೆಗಳು ಸಲ್ಲಿಸುತ್ತೇನೆ. ಸೋನು ಸೂದ್ ಅವರ ನಮ್ಮ ಕರೆಗೆ ಓಗೊಟ್ಟು ಬಂದಿದ್ದು ಖುಷಿ ತಂದಿದೆ. ಅವರ ಸಮಾಜಮುಖಿ ಕಾರ್ಯ ಮತ್ತು ಆದರ್ಶಗಳು ಇತರರಿಗೆ ಮಾದರಿಯಾಗಿವೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಎಮ್‌ಎಲ್‌ಸಿ ಮಾಡುವಂತೆ ಒತ್ತಾಯ

ಇದೇ ವೇಳೆ 21 ಕಿ.ಮೀ, 10 ಕಿ.ಮೀ, 5 ಕಿ.ಮೀ ಮತ್ತು 3 ಕಿ.ಮೀ ಮ್ಯಾರಥಾನ್‌ನಲ್ಲಿ ಪ್ರಥಮ ,ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿಜೇತರಿಗೆ ಸೋನು ಸೂದ್‌ ಅವರು ಮೆಡಲ್, ಟ್ರೋಫಿ, ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಿದರು.

ಗುರುನಾನಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಲಬೀರಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಪುನೀತ್ ಸಿಂಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...