ಮೂವರು ಡಿಸಿಎಂ ಹೇಳಿಕೆ ಬಗ್ಗೆ ಸಿಎಂ ಉತ್ತರಿಸುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್‌

Date:

ನಾವೆಲ್ಲರೂ ಮುಖ್ಯಮಂತ್ರಿ ಅವರ ಕೆಳಗೆ ಕೆಲಸ ಮಾಡುವವರು. ಮೂವರು ಡಿಸಿಎಂ ಬಗ್ಗೆ ಯಾರು ಹೇಳಿಕೆ ನೀಡಿದ್ದಾರೋ ಅವರನ್ನೇ ಕೇಳಿ. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಸಚಿವ ಕೆ ರಾಜಣ್ಣ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ನನ್ನನ್ನು ಡಿಸಿಎಂ ಮಾಡಲಾಗಿದೆ. ನಾವೆಲ್ಲ ಅವರ ಕೈ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಮೂವರು ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಮಾತನಾಡಿದ್ದು ಸಂತೋಷ. ಅವರ ತಲೆಯಲ್ಲಿ ಏನಿದೆಯೋ ಎಂಬುದರ ಬಗ್ಗೆ ಅವರನ್ನೇ ಕೇಳಿ” ಎಂದರು.

ಹರಿಪ್ರಸಾದ್‌ ವಿಚಾರದಲ್ಲಿ ಮೌನವಾಗಿದ್ದೀರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಬಿ ಕೆ ಹರಿಪ್ರಸಾದ್‌ ಅವರು ವರ್ಕಿಂಗ್‌ ಕಮಿಟಿ ಮೆಂಬರ್‌ ಇದ್ದಾರೆ. ಹೈಕಮಾಂಡ್‌ ಮಾತ್ರ ಅವರನ್ನು ಪ್ರಶ್ನೆ ಮಾಡಲು ಬರುತ್ತದೆ. ನನ್ನ ಲೆವಲ್‌ನಲ್ಲಿ ಯಾರನ್ನು ಪ್ರಶ್ನೆ ಮಾಡಬೇಕೋ ಅವರನ್ನು ಮಾಡುತ್ತೇನೆ. ಇದಕ್ಕೆ ಯಾವ ಮುಲಾಜು ಇಲ್ಲ. ಎಳಸು ತರ ಪ್ರಶ್ನೆ ಕೇಳಬೇಡಿ. ನಮ್ಮಲ್ಲಿ ಇದಕ್ಕೆ ಒಂದು ಕಾನೂನು ಪುಸ್ತಕ ಇದೆ. ಓದಿ ತಿಳಿದುಕೊಳ್ಳಿ” ಎಂದು ಪತ್ರಕರ್ತರನ್ನೇ ತರಾಟೆಗೆ ತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...