ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ತನಿಖೆಗೆ ಸಮಿತಿ ರಚನೆ

Date:

  • ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದ ಶಾಸಕ ಸಿ ಪುಟ್ಟರಂಗಶೆಟ್ಟಿ
  • ಸಿಮ್ಸ್‌ ನಿರ್ದೇಶಕರ ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದಿದ್ದ ಕಾರ್ಯಕರ್ತರು

ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಜಿ.ಎಂ ಸಂಜೀವ್ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.

ಡೀನ್‌ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಕೋರಿ ಸ್ಥಳೀಯ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ್ದ ಸಿ.ಎಂ ಸಿದ್ದರಾಮಯ್ಯ, ಆರೋಪಗಳ ಬಗ್ಗೆ ಪರಿಶೀಲಿಸಿ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ಅವರಿಗೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಾಮರಾಜನಗರ

ತಕ್ಷಣವೇ ತನಿಖೆಗೆ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ವಂದಿತ ಶರ್ಮಾ ಸೂಚಿಸಿದ್ದರು. ನವೀನ್‌ ಸಿಂಗ್ ಅವರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ. ರವಿ ಮತ್ತು ಮುಖ್ಯ ಆಡಳಿತಾಧಿಕಾರಿ ಕೆ ಎ ಉಮಾ ಅವರನ್ನೊಳಗೊಂಡ ತನಿಖಾ ಸಮಿತಿ ರಚಿಸಿದ್ದಾರೆ.

“ಸಮಿತಿಯು ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಸಿಮ್ಸ್‌ಗೆ ತಕ್ಷಣವೇ ಭೇಟಿ ನೀಡಿ ಪರಿಶೀಲಿಸಬೇಕು. ಕೂಡಲೇ ವರದಿ ನೀಡಬೇಕು” ಎಂದು ನವೀನ್ ರಾಜ್ ಸಿಂಗ್ ಆದೇಶದಲ್ಲಿ ಹೇಳಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ನ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ದೂರು-ಪ್ರತಿದೂರು ದಾಖಲು

ದೂರಿನ ಪ್ರತಿಯು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು. ಬಳಿಕ ಎರಡೂ ಕಡೆಯಿಂದ ದೂರು ಪ್ರತಿದೂರು ದಾಖಲಾಗಿತ್ತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...