ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ : ದಸಂಸ

Date:

  • ಎನ್‌ಇಪಿ ರದ್ದು ಮಾಡಿ, ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಡಿ
  • ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಮುಸ್ಲಿಂ ಮೀಸಲಾತಿ ಮರುಸ್ಥಾಪಿಸಿ

ಕರ್ನಾಟಕದ ಪ್ರಜ್ಞಾವಂತ ಮತದಾರರು ಸಂವಿಧಾನ ವಿರೋಧಿಗಳನ್ನು ತಿರಸ್ಕರಿಸಿ, ಸಾಮಾಜಿಕ ನ್ಯಾಯ ಕಲ್ಪಿಸಿ, ರಾಜ್ಯದಲ್ಲಿ ಶಾಂತಿ ಕಾಪಾಡುತ್ತಾರೆ ಎಂಬ ಭರವಸೆ ಮೇಲೆ ಕಾಂಗ್ರೆಸ್‌ ಕೈ ಹಿಡಿದು ಇಡೀ ದೇಶಕ್ಕೆ ಒಂದು ಬಲವಾದ ಸಂದೇಶ ರವಾನಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಕೂಡ ರಾಜ್ಯದಾದ್ಯಂತ ಕಾಂಗ್ರೆಸ್‌ ಬೆಂಬಲಿಸುವಂತೆ, ಮತ ಚಲಾಯಿಸಲು ಪ್ರೋತ್ಸಾಹಿಸುವಂತೆ ಕರೆ ನೀಡಲಾಗಿತ್ತು. ನಮ್ಮ ಮನವಿಗೆ ಸ್ಪಂಧಿಸಿ, ಕಾಂಗ್ರೆಸ್‌ನ್ನು ಬೆಂಬಲಿಸಿದ ಎಲ್ಲ ದಲಿತ ಚಳವಳಿಯ ಒಡನಾಡಿಗಳಿಗೆ ಮತ್ತು ಕಾರ್ಯಕರ್ತರಿಗೆ ಭೀಮ ನಮನಗಳು” ಎಂದು ತಿಳಿಸಿದ್ದಾರೆ.

“ಕೇಂದ್ರದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಮತ್ತು ಅನೈತಿಕ ಆಪರೇಷನ್‌ ಕಮಲದ ಮೂಲಕ ಕಳೆದ ಮೂರುವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಒಂದು ಕಡೆಯಾದರೆ, ಅವರ ಹಿಂದಿ ಹೇರಿಕೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತ ಹಲವಾರು ನಿರ್ಧಾರಗಳು ಕನ್ನಡಿಗರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನಡೆಗಳಿಗೆ ಮಂಡಿಯೂರುತ್ತಾ, ಬಿಜೆಪಿ ಹೈಕಮಾಂಡ್ ತಾಳಕ್ಕೆ ತಕ್ಕಂತೆ ಕುಣಿದ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕನ್ನಡಿಗರ ಹಿತ ಕಾಯುವಲ್ಲಿ ವಿಫಲರಾದರು” ಎಂದು ಆರೋಪಿಸಿದ್ದಾರೆ.

“ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸೇರಿದಂತೆ ಹಲವು ದಿನಬಳಕೆ ವಸ್ತುಗಳು ರಾಜ್ಯದ ಬಡಜನರ ಕೈ ಸಡುತ್ತಿದ್ದರೆ, ಮತ್ತೊಂದು ಕಡೆ ಅಜಾನ್, ಹಲಾಲ್, ಬುರ್ಕಾ ಹಾಗೂ ಮುಸ್ಲಿಂ ಸಮುದಾಯದ ವ್ಯಾಪರಕ್ಕೆ ಜಾತ್ರೆ – ದೇವಾಲಯಗಳಲ್ಲಿ ಹೇರಿದ್ದ ನಿಷೇಧವನ್ನು ಸಮರ್ಥಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಕ್ರಿಯೆಗೆ ಪ್ರತಿಕ್ರಿಯೆ”  ಎಂದು ಹೇಳಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನವನ್ನು ಕಳೆದಿದ್ದರು” ಎಂದು ಕಿಡಿಕಾರಿದ್ದಾರೆ.

“ಬಿಜೆಪಿಯ ಇಂಥ ಹಲವು ಅತಿರೇಕದ ವರ್ತನೆಗಳಿಗೆ ಮತ್ತು ಸಂವಿಧಾನ ವಿರೋಧಿ ನಿಲುವುಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. 2023ರ ಮೇ 13ರಂದು ಹೊರಬಿದ್ದ ಕರ್ನಾಟ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಬಹುಮತ ಪಡೆದಿದ್ದು, ಪ್ರಜಾಪ್ರಭೂತ್ವ ವಿರೋಧಿ ಬಿಜೆಪಿ ಮಣ್ಣುಮುಕ್ಕಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರಿನ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮ

“ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರ್ನಾಟಕದ ಜನರು ನಿರೀಕ್ಷೆಗೂ ಮೀರಿ ಬೆಂಬಲಿಸಿದ್ದಾರೆ. ಆದ್ದರಿಂದ, ತನ್ನ ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್‌ ತಾನು ನೀಡಿರುವ ಪ್ರಮುಖ ಭರವಸೆಗಳನ್ನು (ಕಾಂಗ್ರೆಸ್‌ ಗ್ಯಾರಂಟಿಗಳು) ಜಾರಿಗೆ ತರಬೇಕು” ಎಂದು ತಿಳಿಸಿದ್ದಾರೆ.

“ದಲಿತ ಮತ್ತು ದಮನಿತ ಸಮುದಾಯದ ಮಕ್ಕಳಿಗೆ ಮಾರಕವಾಗಿರುವ ಅವೈಜ್ಷಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ)ಯನ್ನು ರದ್ದು ಮಾಡಬೇಕು. ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟು, ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯವನ್ನೇ ಮುಂದುವರಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಪ್ರೌಢ ಶಾಲಾ ಮಕ್ಕಳಿಗೆ ಈ ವರ್ಷದಿಂದ ಬೈಸಿಕಲ್ ವಿತರಣೆ ಜತೆಗೆ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೂ ಬಿಡುಗಡೆ ಮಾಡಬೇಕು. ಎಸ್‌ಸಿಎಸ್‌ಪಿ / ಟಿಎಸ್‌ಪಿ ಕಾಯ್ದೆಯಲ್ಲಿನ 7(ಡಿ) ಕಲಂ ತೆಗೆದು, ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪಕ್ಷ ತನ್ನ ದ್ವೇಷ ರಾಜಕಾರಣದಿಂದ ರದ್ದು ಮಾಡಿದ್ದ ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿ, ಪರಿಶಿಷ್ಟ ಸಮುದಾಯದ ಎಲ್ಲ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ನಿವೃತ್ತ ನ್ಯಾಯಮೂರ್ತಿ ಎಚ್‌ ಎನ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ ನೀಡಬೇಕು” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಪರವಾಗಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...