ರಾಯಚೂರು | 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

Date:

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಒಂದು ವಾರದೊಳಗೆ ಅತಿಥಿ ಉಪನ್ಯಾಸಕರ ಹತ್ತು ತಿಂಗಳ ಸಂಬಳ ಪಾವತಿಗೆ ಕ್ರಮವಹಿಸಲಾಗುವುದು. ಈ ಬಗ್ಗೆ ಇಲಾಖೆ ಆಯುಕ್ತರಿಗೆ ಮಾತನಾಡಿದ್ದು, ಕೂಡಲೇ ಉಪನ್ಯಾಸಕರ ಬೇಡಿಕೆ ಈಡೇರಿಸಲಾಗುವುದು,” ಎಂದರು.

ಕೇಂದ್ರದ ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು ತಾಲೂಕು ಬರಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಈಗಾಗಲೇ ಕಂದಾಯ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಮೂರನೇ ಹಂತದಲ್ಲಿ ಸಿಂಧನೂರನ್ನು ಬರಗಾಲ ಪೀಡಿತ ತಾಲ್ಲೂಕನ್ನಾಗಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಅವವ್ಯಸ್ಥೆ ಮತ್ತು ವೈದ್ಯರು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಹಾಗೂ ಖಾಸಗಿ ಕ್ಲಿನಿಕ್‌ಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ವೈದ್ಯರು ಯಾವುದೇ ಕಾರಣಕ್ಕೂ ಸೇವಾ ಅವಧಿಯೊಳಗೆ ಖಾಸಗಿಯಲ್ಲಿ ಕೆಲಸ ಮಾಡಬಾರದು. ಸಮಯಕ್ಕೆ ಸರಿಯಾಗಿ ಸೇವೆ ಸಲ್ಲಿಸಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಕೂಡಲೇ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...