ಶಿವಮೊಗ್ಗ -ಬೆಂಗಳೂರು ರೈಲು ಪ್ರಯಾಣಿಕರಿಗೆ ಕನೆಕ್ಟಿವ್ ರೈಲು ಸಂಪರ್ಕ ಕಲ್ಪಿಸಿದ ಇಲಾಖೆ

Date:

ಶಿವಮೊಗ್ಗದ ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿಗೆ ಶಿವಮೊಗ್ಗದಿಂದ ಓಡಾಡುವವರು ಇಲ್ಲಿವರೆಗೂ ತಾಳಗುಪ್ಪ ಮೈಸೂರು ಟ್ರೈನ್​ ಹತ್ತಿದರೆ, ಬೆಂಗಳೂರಿಗೆ ಕನೆಕ್ಟಿಂಗ್​ ಟ್ರೈನ್​ ಸಿಗಲ್ಲವೆಂದು ಬೇಸರ ವ್ಯಕ್ತಪಡಿಸ್ತಿದ್ದರು.

ಆದರೆ ಕುವೆಂಪು ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ. ನವೆಂಬರ್ 2 ರಿಂದ ಹೊಸ ಸಮಯದಲ್ಲಿ ಈ ಟ್ರೈನ್ ಸಂಚರಿಸಲಿದೆ.

ತಾಳಗುಪ್ಪದಿಂದ ಮೈಸೂರಿಗೆ ಸಂಚರಿಸುವ ಕುವೆಂಪು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16221) ಪ್ರಸ್ತುತ ಬೆಳಿಗ್ಗೆ 6.15 ಕ್ಕೆ ತಾಳಗುಪ್ಪದಿಂದ ಹೊರಟು ಮಧ್ಯಾಹ್ನ 3.35 ಕ್ಕೆ ಮೈಸೂರು ತಲುಪುತಿತ್ತು. ಹೊಸ ವೇಳಾಪಟ್ಟಿಯ ಪ್ರಕಾರ, ಇದು 25 ನಿಮಿಷ ಮೊದಲೇ, ಅಂದರೆ ಬೆಳಿಗ್ಗೆ 5.50ಕ್ಕೆ ಹೊರಡಲಿದೆ ಮತ್ತು ಮಧ್ಯಾಹ್ನ 3.30ಕ್ಕೆ ಮೈಸೂರು ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ವೇಳಾಪಟ್ಟಿಯ ವಿವರ /Kuvempu Express Train ತಾಳಗುಪ್ಪ : ಬೆಳಿಗ್ಗೆ 5.50 ಕ್ಕೆ ಹೊರಡುವ ಸಮಯ.

ಸಾಗರ ಜಂಬಗಾರು: ಬೆಳಿಗ್ಗೆ 6.10ಕ್ಕೆ ಆಗಮನ.ಶಿವಮೊಗ್ಗ: ಬೆಳಿಗ್ಗೆ 7.55ಕ್ಕೆ ಆಗಮನ.ಭದ್ರಾವತಿ: ಬೆಳಿಗ್ಗೆ 8.20ಕ್ಕೆ ಆಗಮನ.ತರೀಕೆರೆ: ಬೆಳಿಗ್ಗೆ 8.43ಕ್ಕೆ ಆಗಮನ.ಬೀರೂರು: ಬೆಳಿಗ್ಗೆ 9.35ಕ್ಕೆ ಆಗಮನ.ಅರಸೀಕೆರೆ: ಬೆಳಿಗ್ಗೆ 10.50ಕ್ಕೆ ಆಗಮನ.ಹಾಸನ: ಬೆಳಿಗ್ಗೆ 11.47ಕ್ಕೆ ಆಗಮನ.ಹೊಳೆನರಸೀಪುರ: ಮಧ್ಯಾಹ್ನ 12.27ಕ್ಕೆ ಆಗಮನ.ಮೈಸೂರು: ಮಧ್ಯಾಹ್ನ 3.30 ಕ್ಕೆ ತಲುಪಲಿದೆ ಸಿದ್ದಗಂಗಾ ಎಕ್ಸ್‌ಪ್ರೆಸ್‌ ಮತ್ತು ಪುದುಚೇರಿ ಎಕ್ಸ್‌ಪ್ರೆಸ್‌ ರೈಲು ಬೀರೂರಿಗೆ ಬೆಳಗ್ಗೆ 9.50ರ ಹೊತ್ತಿಗೆ ತಲುಪುತ್ತವೆ.

ಅದಕ್ಕೂ ಮೊದಲೇ ಕುವೆಂಪು ಎಕ್ಸ್​ಪ್ರೆಸ್​ ಬೀರೂರು ತಲುಪಿದರೆ, ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರಿಗೆ ಬೀರೂರಿನಲ್ಲಿ ಟ್ರೈನ್​ ಕ್ಯಾಚ್ ಮಾಡಲು ಅನುಕೂಲವಾಗುತ್ತದೆ.

ಈ ನಿಟ್ಟಿನಲ್ಲಿ ಕುವೆಂಪು ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರು ಸಂಪರ್ಕಕ್ಕಾಗಿ ಸ್ವಲ್ಪ ಮುಂಚಿತವಾಗಿ ಪ್ರಾರಂಭಿಸುವಂತೆ ಸಂಸದರು ಕೋರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...