ರಾಯಚೂರು | ಭೂರಹಿತರಿಗೆ ಸರ್ಕಾರಿ ಪಾಳು ಭೂಮಿ ವಿತರಿಸುವಂತೆ ರೈತ ಸಂಘ ಒತ್ತಾಯ

Date:

  • ಭೂರಹಿತ ಗೇಣಿ ಸಾಗುವಳಿ ರೈತರಿಗೆ ಸಹಾಯಧನ ಒದಗಿಸಲು ಹೊಸ ಕಾಯ್ದೆ ರಚಿಸಬೇಕು.
  • ಭೂಸುಧಾರಣೆ ಹೊಸ ತಿದ್ದುಪಡಿ ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು.

ರಾಜ್ಯಾದ್ಯಂತ ಭೂರಹಿತರು ಅರಣ್ಯ ಭೂಮಿ ಸಾಗುವಳಿ ಮಾಡುವುದನ್ನು ನಿಲ್ಲಿಸಬಾರದು. ಅರಣ್ಯ ಇಲಾಖೆ ಹೂಡಿದ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕು ಹಾಗೂ ಸರಕಾರಿ ಭೂಮಿ ಸಾಗುವಳಿ ಮಾಡುವ ಭೂರಹಿತರಿಗೆ ಪಟ್ಟಾ ವಿತರಿಸಲು ಸರ್ಕಾರ ಕೂಡಲೇ ಅಕ್ರಮ – ಸಕ್ರಮ ಕಮಿಟಿ ರಚನೆಗೆ ಆದೇಶ ಹೊರಡಿಸಬೇಕೆಂದು ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾರುಕರ್ತರು “ಭೂಸುಧಾರಣೆ ಹೊಸ ತಿದ್ದುಪಡಿ ಅಧಿನಿಯಮ-2020 ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು. ಭೂರಹಿತ ಗೇಣಿ ಸಾಗುವಳಿ ರೈತರಿಗೆ ಬೆಳೆಸಾಲ, ಸಹಾಯಧನ , ಪರಿಹಾರ ಸೌಲಭ್ಯ ಒದಗಿಸಲು ಹೊಸ ಕಾಯ್ದೆ ರಚಿಸಬೇಕು. ರಾಜ್ಯಾದ್ಯಂತ ಹೆಚ್ಚುವರಿ ಭೂಮಿ, ಸರಕಾರದ ಪಾಳು ಭೂಮಿಯನ್ನು ಭೂರಹಿತರಿಗೆ ವಿತರಿಸಬೇಕೆಂದು” ಒತ್ತಾಯಿಸಿದರು.

“ಸರಕಾರಿ ಭೂಮಿ ಕಬಳಿಕೆ ಮಾಡಿದವರನ್ನು ಭೂಮಿಯಿಂದ ಹೊರ ಹಾಕಿ ಸಮುದಾಯ ಭೂಮಿಗಳನ್ನು ಸಂರಕ್ಷಣೆ ಮಾಡಬೇಕು. ಯಾವ ಉದ್ದೇಶಕ್ಕಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆಯೊ ಆ ಉದ್ದೇಶಕ್ಕೆ ಭೂಮಿಯನ್ನು ಉಪಯೋಗಿಸದಿದ್ದರೆ ಅಂತಹ ಭೂಮಿಯನ್ನು ರೈತರಿಗೆ ಹಿಂತಿರುಗಿಸಲು ಕ್ರಮ ಜರುಗಿಸಬೇಕು. ಪ್ರತಿ ವರ್ಷ ಆಯಾ ಜಿಲ್ಲೆಗಳ ಭೂಮಿ ಲೆಕ್ಕಪತ್ರ ಸಿದ್ಧಪಡಿಸಿ ಸಾರ್ವಜನಿಕ ಪ್ರಕಟಣೆ ನೀಡಬೇಕು ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಟಿಯುಸಿಐ ಜಿಲ್ಲಾಧ್ಯಕ್ಷ ಜಿ.ಅಮರೇಶ, ಕೆಆರ್‌ಎಸ್ ಜಿಲ್ಲಾ ಉಪಾಧ್ಯಕ್ಷ ಸಂತೋಷ ಹಿರೇದಿನ್ನಿ, ಪ್ರಧಾನ ಕಾರ್ಯದರ್ಶಿ ಸೈಯದ್ ಅಬ್ಬಾಸ್ ಅಲಿ, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ, ಮುಖಂಡರಾದ ಕೆ.ಗಿರಿಲಿಂಗ ಸ್ವಾಮಿ, ಶಫೀಕ್ ಪಾಶ, ತಿಪ್ಪಣ್ಣ ಚಿಕ್ಕಹೆಸರೂರು, ಶೇಖರಪ್ಪ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...