ಮೈಸೂರು | ಪೊಲೀಸರು – ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಬೇಕು : ಜಾವಗಲ್ ಶ್ರೀನಾಥ್

Date:

ಮೈಸೂರು ನಗರ ಪೊಲೀಸ್ ಇಲಾಖೆಯಿಂದ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ನಡೆದ ‘ ಮನೆ ಮನೆಗೆ ಪೊಲೀಸ್ ‘ ಜನಸ್ನೇಹಿ ಕಾರ್ಯಕ್ರಮವನ್ನು ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಉದ್ಘಾಟಿಸಿ ‘ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಬೇಕು ‘ ಎಂದು ಅಭಿಪ್ರಾಯಪಟ್ಟರು.

” ಪೊಲೀಸರು ಸಾರ್ವಜನಿಕರ ಶತ್ರುಗಳಲ್ಲ. ಅವರೆಲ್ಲ ನಿಮ್ಮ ಹಕ್ಕುಗಳ ರಕ್ಷಕರು. ಪೊಲೀಸರ ಮೇಲೆ ನಂಬಿಕೆ ಬೆಳೆಸಿಕೊಳ್ಳಬೇಕಿದೆ. ಸಾರ್ವಜನಿಕರ ಆತಂಕವನ್ನು ನಿವಾರಿಸಿ. ಪೊಲೀಸರ ಹಾಗೂ ಸಾರ್ವಜನಿಕರ ನಡುವಿನ ನಂಟನ್ನು ಬಲಪಡಿಸುವ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜನೆ ಶ್ಲಾಘನಿಯ. ಇದರ ಜೊತೆಗೆ ಪೊಲೀಸ್ ಇಲಾಖೆಯ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ” ಎಂದು ಕರೆಕೊಟ್ಟರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ ” ಮನೆ ಮನೆಗೆ ಪೊಲೀಸ್ ಜನಸ್ನೇಹಿ ಕಾರ್ಯಕ್ರಮವಾಗಿದ್ದು. ಜನಸ್ನೇಹಿ ಪೊಲೀಸರು, ಭಯವಿಲ್ಲದ ಸಮಾಜದ ಕನಸಾಗಿದೆ. ಈ ಯೋಜನೆಯ ಮೂಲಕ 250 ಮನೆಗಳ ಜವಾಬ್ದಾರಿ ಬೀಟ್ ಪೊಲೀಸರಿಗೆ ನೀಡಲಾಗಿದೆ. ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಸಾಧಿಸುವ ಯತ್ನ ನಡೆದಿದೆ. ಸಾರ್ವಜನಿಕರ ಆತಂಕ ನಿವಾರಿಸುವುದಕ್ಕಾಗಿ QR ಕೋಡ್ ವ್ಯವಸ್ಥೆ, ಕಚೇರಿ, ಸಭೆ ನಡೆಯುವ ಸ್ಥಳಗಳು, ಮನೆ ಸಮಸ್ಯೆ ನಿವಾರಣೆ, ಮಹಿಳಾ ಕಾನ್ಸ್ಟೇಬಲ್ ನೇಮಕಾತಿ ಮುಂತಾದ ಆನೇಕಾನೇಕ ಹೊಸ ಆಯಾಮಗಳನ್ನು ಯೋಜನೆಯಲ್ಲಿ ಅಳವಡಿಸಲಾಗಿದೆ ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 3 ರಂದು ಬನವಾಸಿ ತೋಟದಲ್ಲಿ ‘ ಬೆಳಕಿನ ಬೇಸಾಯ ‘ ಕಾರ್ಯಗಾರ

ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಸುಂದರ್ ರಾಜ್, ಬಿಂದುಮಣಿ ಸೇರಿದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...