ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

Date:

ಗ್ರಾಮ ಮಟ್ಟದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಮಾರಾಟ ಸಾಗಾಣಿಕೆ ನಿಯಂತ್ರಣ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಕ್ರೀಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ವೆಂಕಟೇಶ್ ಎಮ್ ಹೇಳಿದರು.

ಬಸವಕಲ್ಯಾಣದ ಡಾ. ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ತರಬೇತಿ ಮತ್ತು ಸಮಸ್ಯೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

“ಬಸವಕಲ್ಯಾಣ ತಾಲೂಕಿನ 9 ಗ್ರಾಮ ಪಂಚಾಯತಿಯಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯಲ್ಲಿ ಶಾಲೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ ಕಂಡುಬಂದಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಾರ್ಯಪ್ರವರ್ತರಾಗಿ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ಕೆಲಸ ತ್ವರಿತಗತಿಯಲ್ಲಿ ಮಾಡಬೇಕೆಂದು” ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಕಾವಲು ಸಮಿತಿ ತರಬೇತಿ ಮತ್ತು ಸಮಸ್ಯೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಒಂಬತ್ತು ಗ್ರಾಮ ಪಂಚಾಯತ್ ಪಿಡಿಒಗಳು ಹಾಜರಾಗಬೇಕಿತ್ತು. ಆದರೆ ಮೂರು ಜನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಾತ್ರ ಬಂದಿದ್ದಾರೆ. ಇಂದು ಆಗಮಿಸದ ಪಿಡಿಒಗಳಿಗೆ ಶೋಕಾಸ್ ನೋಟಿಸ್ ನೀಡಿ ಆಯೊಗಕ್ಕೆ ಮಾಹಿತಿ ನೀಡುವಂತೆ ತಾಲೂಕಾ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.

“ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಬಾಲ್ಯ ವಿವಾಹ ಮುಕ್ತ ಕರ್ನಾಟಕ ಆಂದೋಲನ ಮಾಡುವ ಆದೇಶ ಹೊರಡಿಸಿದ್ದು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಬಾಲ್ಯ ವಿವಾಹ ನಿಷೇಧಕ್ಕೆ ಮುಂದಾಗಬೇಕು” ಎಂದು ತಿಳಿಸಿದರು.

ಎಮ್. ವೆಂಟಟೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ರಾಜ್ಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಮಾಡಿರುವ ಉದ್ದೇಶವನ್ನು ಅರಿತುಕೊಂಡು ಮಕ್ಕಳ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ವಿವಿಧ ಇಲಾಖೆಗಳಿಂದ ಬಂದ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ” ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಜಾತಿ ನಿಂದನೆ | ಸರ್ಕಾರಿ ಶಾಲೆಯ ದಲಿತ ಪ್ರಾಂಶುಪಾಲ ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ ಸುಭಾಶ್ಚಂದ್ರ ಎಮ್. ನಿಡಗುಂದಿ, ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ ಬೇಡಕ್‌ಪಳ್ಳಿ , ಬಿಸಿಯೂಟ ಸಹಾಯಕ ನಿರ್ದೇಶಕ  ಜಯಪ್ಪ ಚಾಪಲ್, ನಾಗಶೆಟ್ಟಿ ಭದ್ರಶೆಟ್ಟಿ , ಪ್ರಮೀಳಾ, ಮಲ್ಲೇಶಪ್ಪಾ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ, ಶಾಲಾ ಮುಖ್ಯ ಶಿಕ್ಷಕರು, ಅಂಗನವಾಡಿ ಮೇಲ್ವೀಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಸ್ವ-ಸಹಾಯಗಳ ಎಮ್.ಬಿ.ಕೆ, ಯುವಜನತೆ ಮತ್ತು ಮಕ್ಕಳು ಇತರರು ಉಪಸ್ಥಿತರಿದ್ದರು. ಯೋಜನಾ ಸಂಯೋಜಕ ಸಂಪತ ಕಟ್ಟಿ ಪ್ರಾಸ್ತಾವಿಕ ಮಾತನಾಡಿದರು, ಜಿಲ್ಲಾ ಸಂಯೋಜಕಿ ಸರುಬಾಯಿ ದೊಡ್ಡಿ ಸ್ವಾಗತಿಸಿದರು, ಸಮುದಾಯ ಸಂಘಟಕ ಚಂದ್ರಕಾಂತ್ ವಂದಿಸಿದರು, ಸಂಸ್ಥೆಯ ಸಿಬ್ಬಂದಿಗಳಾದ ಅಶ್ವೀನಿ, ವೀರಭದ್ರಪ್ಪಾ, ಪ್ರಮೋದ್ ಮತ್ತು ಮಾಣಿಕೇಶ್ವರಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...