ಧರ್ಮ ಗ್ರಂಥಗಳ ಸಂದೇಶ ಪರಸ್ಪರ ಹಂಚಿಕೊಳ್ಳುವಂತಾಗಬೇಕು: ಮೂಡ್ನಾಕೂಡು ಚಿನ್ನಸ್ವಾಮಿ

Date:

ಧರ್ಮಗ್ರಂಥಗಳಾದ ಕುರ್‌ಆನ್, ಭಗವದ್ಗೀತೆ, ಬೈಬಲ್ ಸೇರಿದಂತೆ ಎಲ್ಲ ಧರ್ಮ ಗ್ರಂಥಗಳಲ್ಲಿನ ಸಂದೇಶಗಳನ್ನು ಮುಸಲ್ಮಾನರು, ಹಿಂದೂಗಳು, ಕ್ರೈಸ್ತರು ಪರಸ್ಪರ ಹಂಚಿಕೊಳ್ಳುವಂತಾಗಬೇಕು. ಆ ರೀತಿಯ ಕೊಡುಕೊಳ್ಳುವಿಕೆಯ ಸಂಬಂಧಗಳು ಬೆಳೆದರೆ ಮಾತ್ರ ಮನುಷ್ಯರು ಒಂದಾಗಿ, ಇನ್ನೊಬ್ಬರನ್ನು ಸಹಿಸಿಕೊಂಡು ಇರಲು ಸಾಧ್ಯ ಎಂದು ಕನ್ನಡದ ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಿಸಿದರು.

ಸೀರತ್ ಅಭಿಯಾನದ ಭಾಗವಾಗಿ ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ಘಟಕದ ವತಿಯಿಂದ “ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ)” ವಿಷಯದಡಿಯಲ್ಲಿ ಸೆಪ್ಟೆಂಬರ್ 13ರ ಶನಿವಾರದಂದು ಬೆಂಗಳೂರಿನ ಬಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇಸ್ಲಾಂ ಧರ್ಮದಲ್ಲಿ ನ್ಯಾಯಪರ ಸೇರಿದಂತೆ ಹಲವು ಮಹತ್ವದ ಮೌಲ್ಯಗಳಿವೆ. ಅದರಿಂದಾಗಿಯೇ ಇಸ್ಲಾಂ ಧರ್ಮವು ಜಗತ್ತಿನಲ್ಲಿ ಹಲವರನ್ನು ಆಕರ್ಷಿಸಲು ಕಾರಣವಾಗಿತ್ತು. ಆದರೆ, ಇಸ್ಲಾಂ ಧರ್ಮವು ಖಡ್ಗದ ಮೂಲಕ ಪಸರಿಸಲಾಗಿದೆ ಎಂದು ಜಗತ್ತಿನಲ್ಲಿ ವ್ಯವಸ್ಥಿತವಾಗಿ ಸುಳ್ಳು ಹರಡಿಸಲಾಗಿದೆ ಎಂದು ಮೂಡ್ನಾಕೂಡು ಚಿನ್ನಸ್ವಾಮಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾದಿ ಮುಹಮ್ಮದ್ 6ನೇ ಶತಮಾನದಲ್ಲಿ ಆಝಾನ್ ಕೊಡಲು ತನ್ನ ಸುತ್ತಮುತ್ತ ಉನ್ನತ ವ್ಯಕ್ತಿತ್ವಗಳಿದ್ದರೂ ಕೂಡ ಬಿಲಾಲ್ ಎನ್ನುವ ಕಪ್ಪು ವರ್ಣದವನಿಗೆ ಅವಕಾಶ ಮಾಡಿಕೊಟ್ಟಿದ್ದರು. ಆ ಮೂಲಕ ಮನುಷ್ಯರೆಲ್ಲರೂ ಸಮಾನರು ಎಂಬ ಪಾಠವನ್ನು ಕಲಿಸಿದ್ದರು. ತಾನು ಬದುಕಿದ್ದ ಸಮಯದಲ್ಲಿ ಅರೇಬಿಯಾದಲ್ಲಿ ಹೆಣ್ಣು ಮಕ್ಕಳ ಪರವಾಗಿ, ದೀನ ದಲಿತರ ಪರವಾಗಿ ಕರುಣೆಯಿಂದ ಕೆಲಸ ಮಾಡಿದ್ದರು. ‘ನೆರೆಮನೆಯವನು ಹಸಿದಿರುವಾಗ, ನೀವು ಹೊಟ್ಟೆ ಪೂರ್ತಿ ತಿನ್ನಬೇಡಿ, ಹಂಚಿಕೊಂಡು ತಿನ್ನಿ’ ಎನ್ನುವ ಮೂಲಕ ಪ್ರವಾದಿ ಮುಹಮ್ಮದ್ ಅವರು ಬಂಡವಾಳಶಾಹಿಗಳ ವಿರೋಧಿ ಎಂದು ತೋರಿಸಿಕೊಟ್ಟಿದ್ದರು. ಝಕಾತ್ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಔದಾರ್ಯ ಮೆರೆದಿದ್ದರು ಎಂದು ಮೂಡ್ನಾಕೂಡು ಚಿನ್ನಸ್ವಾಮಿ ತಿಳಿಸಿದರು.

ಇದನ್ನು ಓದಿದ್ದೀರಾ? ಹಾಸನ ದುರಂತ | ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿತ್ತು: ಸಚಿವ ಕೃಷ್ಣ ಬೈರೇಗೌಡ

ಇಂದಿನ ರಾಜಕಾರಣಿಗಳಲ್ಲಿ ಬರೀ ಅಸಹನೆಯಷ್ಟೇ ಕಾಣುತ್ತಿದೆ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ನಮ್ಮ ಕನ್ನಡ ಭಾಷೆಯನ್ನು ಎತ್ತರಕ್ಕೆ ಕೊಂಡೊಯ್ದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದನ್ನು ವಿವಾದವನ್ನಾಗಿಸಲಾಗುತ್ತಿದೆ. ಮುಸ್ಲಿಂ ಎಂಬ ಕಾರಣಕ್ಕೆ ಬಾನು ಅವರು ದಸರಾದಲ್ಲಿ ಭಾಗವಹಿಸದಂತೆ ತಡೆಯಲು ಶ್ರಮಿಸುತ್ತಿರುವುದು ದೊಡ್ಡ ಧಾರ್ಮಿಕ ಅಪಚಾರ ಎಂದು ವಿರೋಧಿಸುತ್ತಿರುವವರಿಗೆ ತಿಳಿಯುತ್ತಿಲ್ಲ ಅನ್ನುವುದೇ ವಿಷಾದದ ಸಂಗತಿ. ಎಲ್ಲರನ್ನೂ ಒಳಗೊಂಡರೆ ಮಾತ್ರ ನಮ್ಮ ಸಮಾಜ ಬೆಳೆಯುವುದಕ್ಕೆ ಸಾಧ್ಯ ಎಂದು ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...