ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಿದ ಸಚಿವರು

Date:

  • ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಚಾಲನೆ
  • ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಚಾಲನೆ ನೀಡಿದರು.

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ಹಾಗೂ ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ.

“ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಟಿಯಿಂದ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೆ ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗೆ ಪೂರಕವಾದ ಯೋಜನೆಗಳನ್ನೂ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಮುಂದೆ ಇರುವ ಗೃಹಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಯೋಜನೆಗಳು ಉದಾಹರಣೆಯಾಗಿವೆ” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎನ್‌ಇಪಿಯಿಂದ ಕನ್ನಡವನ್ನೇ ಮರೆತುಬಿಡುವ ಅಪಾಯ: ಸಚಿವ ಮಧು ಬಂಗಾರಪ್ಪ

“ಈ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೂರಕ‌ ಪೌಷ್ಟಿಕ ಆಹಾರವಾಗಿ ಸಿರಿಧಾನ್ಯದ ತಿನಿಸುಗಳನ್ನೂ ಸೇರ್ಪಡೆಗೊಳಿಸಬೇಕು. ಇದರಿಂದ ರೈತರಿಗೂ ಪ್ರೋತ್ಸಾಹ ಸಿಗಲಿದೆ. ಮಕ್ಕಳು ಶಕ್ತಿವಂತರಾಗುತ್ತಾರೆ” ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

“ಕೃಷಿ ಇಲಾಖೆಯಲ್ಲೂ ರೈತರಿಗೆ ಪೂರಕವಾಗಿ ಕೃಷಿ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೈ ಶುಗರ್ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ‌ ಕಾಮಗಾರಿಗಳ ಹಣ ಪಾವತಿಗಾಗಿ ಲೋಕೋಪಯೋಗಿ ಇಲಾಖೆಗೆ ರೂ. 10 ಕೋಟಿ, ಜಿಲ್ಲಾ ಪಂಚಾಯತ್‌ಗೆ 10 ರಿಂದ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...